ಬೆಂಗಳೂರು : ಪೌರ ಸಂಸ್ಥೆಗಳಾಗಿ ಮೇಲ್ದರ್ಜೇಗಿಸಲಾದ ಪಂಚಾಯಿತಿಗಳ ವ್ಯಾಪ್ತಿಯ ಅನಧಿಕೃತ ಆಸ್ತಿಗಳ ಮಾಲೀಕರಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರವು ಗ್ರಾಮಪಂಚಾಯತಿ ಆಸ್ತಿಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಆದೇಶ ಹೊರಡಿಸಲಾಗಿದೆ.
ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳು ಪೂರ್ವದಲ್ಲಿ ತೆರೆದಿರುವ ಖಾತೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಹಾಗೂ ಸ್ಥಳೀಯ ಯೋಜನಾ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ಗ್ರಾಮ ಪಂಚಾಯಿತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಿದ ತರುವಾಯ ಈ ಹಿಂದ ಗ್ರಾಮ ಪಂಚಾಯಿತಿಗಳು, ಇ-ಸ್ವತ್ತು ತಂತ್ರಾಂಶದಡಿಯಲ್ಲಿ ನಿರ್ವಹಿಸಿದ ಖಾತೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ದಾಖಲಿಸಲು ನಗರ ಸ್ಥಳೀಯ ಸಂಸ್ಥೆಗಳಿಗೆ (ಬಿ.ಬಿ.ಎಂ.ಪಿ. ಹೊರತುಪಡಿಸಿ) ನಿರ್ದೇಶನ ನೀಡಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಇ-ಸ್ವತ್ತು ಮತ್ತು ನಗರ ಪ್ರದೇಶಗಳಲ್ಲಿ ಇ-ಖಾತಾ ನೀಡುವ ಕುರಿತು ಪರಾಮರ್ಶಿಸಲು ರಚಿಸಲಾಗಿರುವ ಸಚಿವ ಸಂಪುಟದ ಉಪ ಸಮಿತಿಯ ಸಭೆಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಉಲ್ಲೇಖ (3) ರ ಸರ್ಕಾರದ ದಿನಾಂಕ 22.03.2017 ರ ಸುತ್ತೋಲೆ ಹೊರಡಿಸುವ ಪೂರ್ವದಲ್ಲಿ ತೆರೆದಿರುವ ಖಾತಾಗಳನ್ನು ಇ-ಆಸ್ತಿ ತಂತ್ರಾಂಶದಡಿ ಮುಂದುವರೆಸುವ ಬಗ್ಗೆ ಹಾಗೂ ಗ್ರಾಮ ಪಂಚಾಯಿತಿಗಳು, ಇ-ಸ್ವತ್ತು ತಂತ್ರಾಂಶದಡಿಯಲ್ಲಿ ನಿರ್ವಹಿಸಿರುವ ಖಾತೆಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತನಗೊಂಡ ನಂತರ ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸುವ ಬಗ್ಗೆ ಚರ್ಚಿಸಲಾಗಿರುತ್ತದೆ.
ಪೌರಾಡಳಿತ ನಿರ್ದೇಶಕರ ಸುತ್ತೋಲೆಯಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ನಿಯಮಬಾಹಿರ ಖಾತಾ ವರ್ಗಾವಣೆಗಳನ್ನು ಗುರುತಿಸಿ ನಿಯಮಾನುಸಾರ ರದ್ದುಪಡಿಸಲು ಅಗತ್ಯ ಕ್ರಮ ಕೈಗೊಳ್ಳಲು ಆಯುಕ್ತರು/ಪೌರಾಯುಕ್ತರು/ಮುಖ್ಯಾಧಿಕಾರಿ ರವರಿಗೆ ಸೂಚಿಸಲಾಗಿದೆ.
ಸರ್ಕಾರದ ಸುತ್ತೋಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಇನ್ನು ಮುಂದೆ ಸಕ್ಷಮ ಪ್ರಾಧಿಕಾರಗಳಿಂದ ವಿನ್ಯಾಸ ಅನುಮೋದನೆ ಪಡೆಯದೇ ಇರುವ ನಿವೇಶನಗಳಿಗೆ ಖಾತೆ ನೀಡಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಸುತ್ತೋಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆಗಳು ವ್ಯವಸ್ಥಿತವಾಗಿ ಇ-ಆಸ್ತಿ ತಂತ್ರಾಂಶದಲ್ಲಿ ಅಧಿಕೃತ ಆಸ್ತಿಗಳನ್ನು ಹಾಗೂ ಅಧಿಕೃತವಲ್ಲದ ಆಸ್ತಿಯ ಮಾಹಿತಿಗಳನ್ನು ದಾಖಲಿಸುವ ಬಗ್ಗೆ, ನಿರ್ದೇಶನಗಳನ್ನು ನೀಡಲಾಗಿದೆ. ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ಕೆಯ ಅಂಶಗಳು ಅನ್ವಯವಾಗುತ್ತವೆ.
ಸ್ಥಳೀಯ ಯೋಜನಾ ಪ್ರದೇಶ ಘೋಷಣೆಯಾಗದೇ ಇರುವ ಪುದೇಶಗಳಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉಲ್ಲೇಖ (3) ರ ಸುತ್ತೋಲೆ ಹೊರಡಿಸಿದ ದಿನಾಂಕದಿಂದ ನಗರ ಸ್ಥಳೀಯ ಸಂಸ್ಥೆಗಳು ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯದೇ ರಚಿಸಲಾಗಿರುವ ನಿವೇಶನಗಳಿಗೆ ಖಾತೆ ನೀಡಲು ಅವಕಾಶವಿರುವುದಿಲ್ಲ.
ಸ್ಥಳೀಯ ಯೋಜನಾ ಪ್ರದೇಶ ಘೋಷಣೆಯಾಗದೇ ಇರುವ ಪ್ರದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ತೆರೆದಿರುವ ಖಾತೆಗಳನ್ನು ಹಾಗೂ ಸ್ಥಳೀಯ ಯೋಜನಾ ಪ್ರದೇಶ ಘೋಷಣೆಯಾಗದೇ ಇರುವ ಪುದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತನೆಗೊಂಡ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ, ನಗರಾಭಿವೃದ್ಧಿ ಇಲಾಖೆಯ ನಿರ್ದೇಶನಗಳು ಪರಿವರ್ತನಗೊಂಡ ದಿನಾಂಕದಿಂದ ಅನ್ವಯವಾಗುವುದರಿಂದ, ಇದಕ್ಕೆ ಪೂರ್ವದಲ್ಲಿ ಗ್ರಾಮ ಪಂಚಾಯಿತಿಗಳ ವತಿಯಿಂದ ಇ-ಸ್ವತ್ತು ತಂತ್ರಾಂಶದಡಿ ತೆರೆಯಲಾದ ಖಾತೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಉಲ್ಲೇಖ (4) ರ ಸುತ್ತೋಲೆಯ ನಿರ್ದೇಶನದನ್ವಯ ಕೆಳಕಂಡ ಷರತ್ತುಗಳಿಗೊಳಪಟ್ಟು (ಬಿ.ಬಿ.ಎಂ.ಪಿ. ಹೊರತುಪಡಿಸಿ) ದಾಖಲಿಸುವಂತೆ ಸೂಚಿಸಿದೆ.