ವಿಜಯನಗರ : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಪಕ್ಷಾತೀತವಾಗಿ ಅನುದಾನ ನೀಡಿದ್ದೇನೆ. ಗೆದ್ದ ಮೇಲೆ ಆ ಪಕ್ಷ, ಈ ಪಕ್ಷ ಎಂದು ಹೇಳದೇ ಅಭಿವೃದ್ಧಿ ಮಾಡಿದ್ದೇನೆ. ಬಿಜೆಪಿಯವರು ಒಂದು ಭರವಸೆಯನ್ನಾದ್ರೂ ಈಡೇರಿಸಿದ್ದಾರಾ?ಎಂದು ಪ್ರಶ್ನಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿಗೆ ಧೈರ್ಯವಿದ್ರೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲಿ, ಕಾಂಗ್ರೆಸ್ ಧಮ್ ಬಗ್ಗೆ ಪ್ರಶ್ನೆ ಮಾಡುವ ಸಿಎಂ ಬೊಮ್ಮಾಯಿ,ಮೋದಿ ಮುಂದೆ ನಾಯಿಯಂತೆ ಇರ್ತಾರೆ. ಬೊಮ್ಮಾಯಿಗೆ ಧಮ್, ತಾಕತ್ ಇದ್ರೆ ಕೇಂದ್ರದಿಂದ ಅನುದಾನ ತನ್ನಿ ಎಂದು ಹೇಳಿದ್ದಾರೆ.