ಮೈಸೂರು : ನಗರದಲ್ಲಿ ಸಿಲಿಂಡರ್ ಸ್ಪೋಟಗೊಂಡು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡ ಘಟನೆ ಬೆಳಕಿಗೆ ಬಂದಿದೆ.
ಬನ್ನಿಮಂಟಪದ ಅಗ್ನಿಶಾಮಕ ದಳದ ವಸತಿ ಗೃಹದಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಒಂದೇ ಮನೆಯ ನಾಲ್ವರು ಮತ್ತು ಪಕ್ಕದ ಮನೆಯ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.