ಹಾವೇರಿ : ಹಾವೇರಿ ನಗರದಲ್ಲಿ ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಹಾವೇರಿ ಜಿಲ್ಲೆಯಾದ್ಯಂತ ಎಲ್ಲಾ ಪಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ.
ಹಾವೇರಿ ಜಿಲ್ಲೆಯಾದ್ಯಂತ ಎಲ್ಲಾ ಪಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ದಿನಾಂಕ: 06-01-2023 ಮತ್ತು 7-01-2023 ರಂದು ರಜೆ ಘೋಷಿಸಲು ಆದೇಶಿಸಲಾಗಿರುತ್ತದೆ. ಸದರಿ ಆದೇಶದನ್ವಯ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 06-01-2023 ಮತ್ತು 07-01-2023 ರಂದು ರಜೆ ಘೋಷಿಸಿ ಆದೇಶಿಸಲಾಗಿದೆ.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲಾ ಪ್ರತಿನಿಧಿಗಳಿಗೆ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ವಸತಿ ಸೌಕರ್ಯಕ್ಕೆ ಆಯ್ಕೆ ಮಾಡಲಾಗಿದ್ದು, ಸದರಿ ಪಟ್ಟಿಯಲ್ಲಿರುವ ಶಾಲೆಗಳಿಗೆ ದಿನಾಂಕ: 04-01-2013 ರಿಂದ 05-01-2023ರ ವರೆಗೆ ಹೆಚ್ಚುವರಿಯಾಗಿ 12 ದಿನ ರಜೆ ಘೋಷಿಸಿದೆ. ಜಿಲ್ಲೆಯಲ್ಲಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಸೂಚಿಸಿದೆ.
BIGG NEWS : ಹುಬ್ಬಳ್ಳಿ ಜನತೆ ‘ಪವರ್’ ಶಾಕ್..! ಈ ಪ್ರದೇಶಗಳಲ್ಲಿ ಜ.5 ರಿಂದ ಜ.14 ರವರೆಗೆ ವಿದ್ಯುತ್ ಕಟ್