ಕೊಪ್ಪಳ : ರಾಜ್ಯದಲ್ಲಿ ಮಾತ್ರ ಅಲ್ಲ, ಇಡಿ ದೇಶದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಒಂದು ಪ್ರಮುಖ ಪಕ್ಷವಾಗಿ ಬೆಳೆಯಲಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
BREAKING NEWS: ಮೈಸೂರಲ್ಲಿ ಮತ್ತೆ ಚಿರತೆ ಆತಂಕ ಸೃಷ್ಟಿ : CFTRI ಆವರಣದ ಶಾಲೆಯಲ್ಲಿ ಪ್ರತ್ಯಕ್ಷ
ಸುದ್ದಿಗಾರರೊಂದಿಗೆ ಮಾತಾಡುವಾಗ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಗ್ಗೆ ಬೇರೆ ಬೇರೆ ಪಕ್ಷಗಳ ನಾಯಕರು ಏನು ಮಾತಾಡುತ್ತಾರೆ, ಯಾವ ಟೀಕೆಗಳು ಮಾಡುತ್ತಾರೆ ಅನ್ನೋದರ ಬಗ್ಗೆ ತಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಆದರೆ ಜನರ ಮೇಲೆ ವಿಶ್ವಾಸವಿದೆ, ಅವರು ಕೈಬಿಡುವುದಿಲ್ಲ ಅಂತ ಚೆನ್ನಾಗಿ ಗೊತ್ತಿದೆ ಎಂದು ಹೇಳಿದರು.
ಜನೆವರಿ 16 ರ ನಂತರ ಪಕ್ಷದ ಪ್ರಣಾಳಿಕೆ ಮತ್ತು ಅಭ್ಯರ್ಥಿಗಳ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಒಎಂಸಿ ಎಂಡಿ ಬಿ.ವಿ. ಶ್ರೀನಿವಾಸ ರೆಡ್ಡಿ ಕೊಪ್ಪಳ, ರಾಯಚೂರು, ಕಲಬುರಗಿಯ ಸೇಡಂ ಪೈಕಿ ಒಂದು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಉತ್ತರ ಕರ್ನಾಟಕದ 64 ಮತ್ತು ದಕ್ಷಿಣ ಕರ್ನಾಟಕದ 38 ಕ್ಷೇತ್ರಗಳಲ್ಲಿ ಕೆಆರ್ಪಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಜ.16ರಂದು ಉತ್ತರ ಕರ್ನಾಟಕದ 25 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ರೆಡ್ಡಿ ಘೋಷಿಸಲಿದ್ದಾರೆ ಎನ್ನಲಾಗಿದೆ.