ನೊಯ್ಡಾ : ಕರ್ನಾಟದಲ್ಲಿ ಚಿರತೆ ಪ್ರತ್ಯಕ್ಷ ಬೆನ್ನಲ್ಲೆ ಇದೀಗ ನೊಯ್ಡಾದಲ್ಲಿ ಅಜ್ನಾರಾ ಲೆ ಗಾರ್ಡನ್ ಸೊಸೈಟಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷಗೊಂಡಿದ್ದು ಆತಂಕ ಸೃಷ್ಟಿಯಾಗಿದೆ. ಬಳಿಕ ಅರಣ್ಯ ಇಲಾಖೆ ಶೋಧ ಕಾರ್ಯ ಮುಂದುವರಿದ್ದಾರೆ.
ನಿರ್ಮಾಣ ಹಂತದ ಕಟ್ಟಡದ ಮಹಡಿಯ ಬಳಿ ಚಿರತೆ ಓಡುತ್ತಿರುವ ದೃಶ್ಯಗಳು ಸೆರೆಯಾಗಿದ್ದು, ಚಿರತೆ ಓಡಾಟದ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿ (ಎಫ್ಡಿಒ) ಪ್ರಮೋದ್ ಶ್ರೀವಾಸ್ತವ ಖಚಿತಪಡಿಸಿ ಮಾಹಿತಿ ನೀಡಿದ್ದಾರೆ.
ಇದೀಗ ಆನ್ಲೈನ್ನಲ್ಲಿ ವಿಡಿಯೋ ವೈರಲ್ ಕೂಡ ಆಗಿದೆ. ಈ ಅಜ್ನಾರಾ ಲೆ ಗಾರ್ಡನ್ ಸೊಸೈಟಿಯಲ್ಲಿ ವಸತಿ ಪ್ರದೇಶದಲ್ಲಿ ಚಿರತೆ ಸೆರೆಯಾಗಿ ಈಗಾಗಲೇ ತಂಡಗಳನ್ನು ರಚಿಸಲಾಗಿದೆ. ಮೀರತ್ನ ತಜ್ಞರನ್ನು ಸಹ ನಿಯೋಜನೆ ಮಾಡಲಾಗಿದೆ.
ಅರಣ್ಯ ಇಲಾಖೆಯಿಂದ ಚಿರತೆ ಸೆರೆ ಹಿಡಿಯಲು ಬೋನು ಇಡೋದಕ್ಕೆ ಆದೇಶ ಕೂಡಾ ನೀಡಲಾಗಿದೆ. ಶೋಧಕಾರ್ಯ ಮುಂದುವರಿಸಿದ್ರು, ಅರಣ್ಯಾಧಿಕಾರಿಗಳಿಂದ ಚಿರತೆ ಸೆರೆ ಹಿಡುಯುವಾಗ ತಪ್ಪಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
Leopard Spotted at Ajnara Le Garden Society in Greater Noida pic.twitter.com/fMvoygXLML
— Mamta Gusain (@Mamtagusain5) January 3, 2023