ಬೆಂಗಳೂರು : ಡಿಕೆಶಿ ಮುಂದೆ ಬಾಲ ಬಿಚ್ಚೋಕೆ ನಿಮಗೆ ಆಗಲ್ಲ , ಸಿದ್ದರಾಮಯ್ಯನವರೇ ನೀವು ಡಿಕೆಶಿ ಮುಂದೆ ಏನಾಗಿದ್ದೀರಿ ಸಿದ್ದರಾಮಯ್ಯ ವಿರುದ್ಧ ಸಚಿವ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಗೆ ಧೈರ್ಯವಿದ್ರೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲಿ, ಕಾಂಗ್ರೆಸ್ ಧಮ್ ಬಗ್ಗೆ ಪ್ರಶ್ನೆ ಮಾಡುವ ಸಿಎಂ ಬೊಮ್ಮಾಯಿ,ಮೋದಿ ಮುಂದೆ ನಾಯಿಯಂತೆ ಇರ್ತಾರೆ. ಬೊಮ್ಮಾಯಿಗೆ ಧಮ್, ತಾಕತ್ ಇದ್ರೆ ಕೇಂದ್ರದಿಂದ ಅನುದಾನ ತನ್ನಿ ಎಂದು ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿದೆ. ರಾಹುಲ್ , ಸೋನಿಯಾ ಗಾಂಧಿ ಮುಂದೆ ಗುಲಾಮಗಿರಿ ತೋರಿಸಿದ್ದೀರಿ, ನಿಮ್ಮ ಗುಲಾಮಗಿರಿ ಬಗ್ಗೆಯೂ ನಮಗೆ ಗೊತ್ತು, ಸಿದ್ದರಾಮಯ್ಯ ಕೂಡಲೇ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.
BIGG NEWS : ಸೋನಿಯಾ ಗಾಂಧಿ ಶೀಘ್ರ ಗುಣಮುಖರಾಗಲಿ : ಸಿದ್ದರಾಮಯ್ಯ ಟ್ವೀಟ್ ಮೂಲಕ ಹಾರೈಕೆ