ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ( Guest Lecturer ) ಆಯ್ಕೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ಜ.10 ಕೊನೆ ದಿನವಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ( Department of Collegiate Education ) ಮಾಹಿತಿ ನೀಡಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತ್ರ, ಉಳಿಕೆಯಾಗಿರುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ( Appointment of Guest Lecturers ) ಎಂದಿದೆ.
ಗ್ರಂಥಪಾಲಕಲು ಹಾಗೂ ದೈಹಿಕ ಶಿಕ್ಷಣ ಬೋಧಕರು ಒಳಗೊಂಡಂತೆ ನೇಮಕ ಮಾಡಲಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 03-01-2023ರಿಂದ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-01-2023 ಆಗಿದೆ.
ದಿನಾಂಕ 16-01-2023 ರಿಂದ 25-01-2023ರವರೆಗೆ ಮೆರಿಟ್ ಪಟ್ಟಿಯನ್ವಯ ಸ್ಥಳ ಆಯ್ಕೆಗಾಗಿ ಕೌನ್ಸಿಲಿಂಗ್ ನಡೆಲಿದೆ. ಸ್ಥಳ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಸಂಬಂಧಪಟ್ಟ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ದಿನಾಂಕ 01-02-2023 ಕೊನೆಯ ದಿನವಾಗಿದೆ ಎಂದು ಹೇಳಿದೆ.
ಇನ್ನೂ ಅರ್ಹ ಅಭ್ಯರ್ಥಿಗಳು ಅತಿಥಿ ಉಪನ್ಯಾಸಕರ ಹುದ್ದೆಗಾಗಿ https://dce.karnataka.gov.in ಗೆ ಭೇಟಿ ನೀಡಿ, ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸುವಂತೆ ತಿಳಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ