ಬೆಳಗಾವಿಯ : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಜನ ಮೃತಪಟ್ಟ ಘಟನೆ ನಡೆದಿದೆ.
ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಹನುಮವ್ವ, ದೀಪಾ, ಸುಪ್ರಿತಾ, ಮಾರುತಿ, ಇಂದಿರವ್ವ ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. ಸವದತ್ತಿ ಯಲ್ಲಮನ ದರ್ಶನಕ್ಕೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
BIGG NEWS : ನಾಳೆಯಿಂದ ಹಾವೇರಿಯಲ್ಲಿ ‘ಕನ್ನಡ ಸಾಹಿತ್ಯ ಸಮ್ಮೇಳನ’ : ಸಿಎಂ ಸೇರಿ ಅತಿಥಿಗಳ ಭಾಷಣಕ್ಕೆ ಸಮಯ ನಿಗದಿ