ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಬಿಗ್ ಶಾಕ್ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಹಂಚಿಕೆಯಾಗುತ್ತಿದ್ದ 10 ಕೆಜಿ ಅಕ್ಕಿಯ ಬದಲಿಗೆ ಇನ್ಮುಂದೆ ಕೇವಲ 6 ಕೆಜಿ ಅಕ್ಕಿ ಮಾತ್ರ ಸಿಗಲಿದೆ.
ಕೋವಿಡ್ ಹಿನ್ನಲೆಯಲ್ಲಿ 2020-21 ರ ಮೇ ತಿಂಗಳಿನಿಂದ 2022 ರ ಡಿಸೆಂಬರ್ 31 ರವರೆಗೆ ಕೇಂಧ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಸಾರ್ವಜನಿಕ ವಿತರಣ ಪದ್ಧತಿಯಲ್ಲಿ ರಾಜ್ಯದ ಆದ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿಯನ್ನು ವಿತರಿಸುತ್ತಿತ್ತು. ರಾಜ್ಯ ಸರ್ಕಾರವು 5 ಕೆಜಿ ಅಕ್ಕಿ ವಿತರಿಸುತ್ತಿತ್ತು. ರಾಜ್ಯ ಸರ್ಕಾರವು ಕೇಂದ್ರದ ಪಾಲಿನ ಜೊತೆಗೆ ಹೆಚ್ಚುವರಿಯಾಗಿ ಕೇವಲ 1 ಕೆಜಿ ಅಕ್ಕಿಯನ್ನು ಮಾತ್ರ ವಿತರಿಸಲು ಆದೇಶ ಹೊರಡಿಸಿದೆ. ಹೊಸ ಆದೇಶ ಫೆಬ್ರವರಿಯಿಂದ ಜಾರಿಗೆ ಬರಲಿದೆ.
ರಾಜ್ಯದಲ್ಲಿ ಪ್ರಸ್ತುತ 10,91,508 ಅಂತ್ಯೋದಯ ಕಾರ್ಡ್ ಗಳಿದ್ದು, 44,83,745 ಮಂದಿ ಫಲಾನುಭವಿಗಳಿದ್ದಾರೆ. ಹಾಗೆಯೇ 1,15,93,227 ಬಿಪಿಎಲ್ ಕಾರ್ಡ್ ಗಳಿದ್ದು, ಒಟ್ಟು 3,87,79,975 ಮಂದಿ ಫಲಾನುಭವಿಗಳಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಪ್ರತಿ ತಿಂಗಳು 10 ಕೆಜಿ ಅಕ್ಕಿಯ ಬದಲು ತಲಾ 6 ಕೆಜಿ ಅಕ್ಕಿಯನ್ನು ಪಡೆಯಲಿದ್ದಾರೆ.
ವಿಧಾನಸಭಾ ಚುನಾವಣೆ : ಕೋಲಾರ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ |Election 2023
BIG NEWS: 17,000ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ʻಅಮೆಜಾನ್ʼ ಬಿಗ್ ಪ್ಲಾನ್ : ವರದಿ | Amazon layoff