ಬಂದಾ(ಉತ್ತರ ಪ್ರದೇಶ): ದೆಹಲಿಯ ಸುಲ್ತಾನ್ಪುರಿಯಲ್ಲಿ 20 ವರ್ಷದ ಯುವತಿಯ ಭೀಕರ ಅಪಘಾತದ ನೆನಪು ಮಾಸುವ ಮುನ್ನವೇ ಅಂತದ್ದೇ ಒಂದು ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸಮೇತ ಮಹಿಳೆಯನ್ನು ಟ್ರಕ್ ಸುಮಾರು ಮೂರು ಕಿಲೋಮೀಟರ್ ವರೆಗೆ ಎಳೆದೊಯ್ದಿದೆ. ಇದರ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಮೃತಳನ್ನು ಪುಷ್ಪಾ ದೇವಿ ಎಂದು ಗುರುತಿಸಲಾಗಿದೆ. ಈಕೆ ವಿಶ್ವವಿದ್ಯಾನಿಲಯವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪುಷ್ಪಾಳ ಸ್ಕೂಟಿಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ ಸ್ಕೂಟಿ ಟ್ರಕ್ಗೆ ಸಿಲುಕಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಆಕೆ ಅಲ್ಲೇ ಸಾವನ್ನಪ್ಪಿದ್ದಾಳೆ.
ಘಟನಾ ಸ್ಥಳಕ್ಕೆ ಪೊಲೀಸ್ ಪಡೆಗಳು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದು, ತನಿಖೆ ಮುಂದುವರೆದಿದೆ. ಆದ್ರೆ, ಚಾಲಕನನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
‘ಪಠಾಣ್’ ವಿರುದ್ಧ ಆಕ್ರೋಶ: ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ ವೇಳೆ ಮಾಲ್ ಧ್ವಂಸ | WATCH VIDEO
ʻಡಿಜೆ ನಿಲ್ಲಿಸಿʼ ಎಂದಿದ್ಕೆ ಪಶ್ಚಿಮ ಬಂಗಾಳದ ಟಿಎಂಸಿ ನಾಯಕನ ಕೊಲೆ, 14 ಮಂದಿ ಅರೆಸ್ಟ್
‘ಪಠಾಣ್’ ವಿರುದ್ಧ ಆಕ್ರೋಶ: ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ ವೇಳೆ ಮಾಲ್ ಧ್ವಂಸ | WATCH VIDEO
ʻಡಿಜೆ ನಿಲ್ಲಿಸಿʼ ಎಂದಿದ್ಕೆ ಪಶ್ಚಿಮ ಬಂಗಾಳದ ಟಿಎಂಸಿ ನಾಯಕನ ಕೊಲೆ, 14 ಮಂದಿ ಅರೆಸ್ಟ್