ಬೆಂಗಳೂರು : ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ವೈಮಾನಿಕ ಪರಿಶೀಲನೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು ನಡೆಸಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಇಂದು ಚೆನ್ನೈ ಎಕ್ಸ್ ಪ್ರೆಸ್ ವೇ ಯೋಜನೆಗಳ ವೈಮಾನಿಕ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಅವರೊಂದಿಗೆ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ನಿರ್ಮಾಣ ಕಾರ್ಯದ ವೈಮಾನಿಕ ಪರಿಶೀಲನೆ ನಡೆಸಿದರು. ಇದರಿಂದ 10 ಲೇನ್ನ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಪ್ರಯಾಣದ ಸಮಯ 7 ಗಂಟೆಗಳಿಂದ 3 ಗಂಟೆಗಳವರೆಗೆ ಕಡಿತಗೊಳಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ. ಈಗ ಚೆನ್ನೈಗೆ ತೆರಳಲು 5 ಗಂಟೆ ಬೇಕಾಗುತ್ತಿದೆ. ಆದರೆ, ಈ ಹೆದ್ದಾರಿಯಿಂದ 2 ಗಂಟೆ 15 ನಿಮಿಷಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಬಹುದು. ಜನವರಿ 24ರೊಳಗೆ ನಾವು ಎಕ್ಸ್ಪ್ರೆಸ್ವೇ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಇಟ್ಟುಕೊಂಡಿದ್ದೇವೆ , ಈಗಾಗಲೇ 36% ಕಾಮಗಾರಿ ಪೂರ್ಣಗೊಂಡಿದೆ ಎಂದರು. ನಾವು 16,730 ಕೋಟಿ ಮೌಲ್ಯದ ಈ 262 ಕಿ.ಮೀ ಉದ್ದದ 8 ಪಥದ ರಚನೆಯನ್ನು ನಿರ್ಮಿಸುತ್ತಿದ್ದೇವೆ ಎಂದು ಹೇಳಿದ್ದಾರೆ.. ನಂತರ ನಿತಿನ್ ಚನ್ನಪಟ್ಟಣ ಕಡೆಗೆ ತೆರಳಿ ನಂತರ ಬಂದು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
BIG NEWS : 7,000 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ʻಸೇಲ್ಸ್ಫೋರ್ಸ್ʼ | ʻSalesforceʼ Layoff
ಕಟೀಲ್ ಕರಾವಳಿಗರ ಕಿವಿ ಮೇಲೆ ಮತ್ತೆ ‘ಲವ್ ಜಿಹಾದ್’ ಹೂ ಇಡಲು ಹೊರಟಿದ್ದಾರೆ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ
Interacting with Media on the progress of Bengaluru – Chennai Expressway, Karnataka https://t.co/u5OXQnoZLo
— Nitin Gadkari (@nitin_gadkari) January 5, 2023