ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಒಂದು ಗದ್ದೆಗೆ ಪಲ್ಟಿ ಹೊಡೆದು 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚನ್ನರಾಯಪಟ್ಟಣ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಬಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಪಕ್ಕದ ಗದ್ದೆಗೆ ಉರುಳಿದೆ.
ಪರಿಣಾಮ ಬಸ್ನಲ್ಲಿದ್ದ 32 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಗೊಂಡವರಿಗೆ ಕೆಆರ್ ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
BIGG NEWS : ಮಂಡ್ಯದಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ : ನಿಟ್ಟುಸಿರು ಬಿಟ್ಟ ಜನರು |Leopard