ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟ ಬಂದಿದೆ.
ಈ ಪ್ರಕರಣದಲ್ಲಿ ಸಲ್ಲಿಸಿರುವ ಬಿ ರಿಪೋರ್ಟ್ನ ಸಂಪೂರ್ಣ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ನೀಡುವಂತೆ ಆದೇಶಿಸಿದೆ. 42ನೇ ವಿಶೇಷ ನ್ಯಾಯಾಲಯ ಆದೇಶಿಸಿದ್ದು ಜನವರಿ 31ರೊಳಗೆ ಎಲ್ಲಾ ಸಾಕ್ಷ್ಯಗಳನ್ನು ಕೋರ್ಟ್ಗೆ ಸಲ್ಲಿಸಿ ಎಂದು ಸೂಚನೆ ನೀಡಿದೆ.ಈ ಹಿಂದೆ ಕುಟುಂಬಸ್ಥರು ಬಿ ರಿಪೋರ್ಟ್ ಪ್ರಶ್ನಿಸಿ, ಕೋರ್ಟ್ ಮೊರೆ ಹೋಗಿದ್ದರು.
BREAKING NEWS: ಚಾಮುಂಡಿಬೆಟ್ಟದ ಬಳಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ: ತಪ್ಪಿದ ಭಾರೀ ದುರಂತ
ಆ ಸಂದರ್ಭದಲ್ಲಿ ದಾಖಲಾತಿ ನೀಡಿದ್ದ ಉಡುಪಿ ಪೊಲೀಸರು ಸಂಪೂರ್ಣ ದಾಖಲಾತಿ ಸಲ್ಲಿಕೆಗೆ ಹಿಂದೇಟು ಹಾಕಿದ್ದರು. ಇದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ನ್ಯಾಯಾಲಯದ ಹೊಸ ಆದೇಶ ಹೊರಡಿಸಿದೆ.ಕೆಲವೊಂದು ಸಾಕ್ಷ್ಯಗಳಲ್ಲಿ ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪ ಪಿಎಗೆ ಹಣ ನೀಡಿರುವುದು ವಾಟ್ಸಪ್ ಚಾಟ್ನಲ್ಲಿ ಬಹಿರಂಗವಾಗಿದೆ. ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪ ಪಿಎ ಜೊತೆ ನಡೆಸಿರುವ ವಾಟ್ಸಪ್ ಚಾಟ್ ಪ್ರತಿ ಕೂಡ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ಮೂಲಕ ಈಶ್ವರಪ್ಪಗೆ ಸಂತೋಷ್ ಆತ್ಮಹತ್ಯೆ ಪ್ರಕರಣ ಇನ್ನೂ ಸಂಕಷ್ಟ ಎದುರಾಗಿದೆ.
BREAKING NEWS: ಚಾಮುಂಡಿಬೆಟ್ಟದ ಬಳಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ: ತಪ್ಪಿದ ಭಾರೀ ದುರಂತ