ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ಗೆ ಉತ್ತೇಜನ ನೀಡುವ ಸಲುವಾಗಿ ಗುಲಾಂ ನಬಿ ಆಜಾದ್ ಅವರ ರಾಜೀನಾಮೆಯ ನಂತರ ಪಕ್ಷವನ್ನು ತೊರೆದ ಹಲವು ನಾಯಕರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ರಾಜ್ಯಕ್ಕೆ ಪ್ರವೇಶಿಸುವ ಮರು ಸೇರ್ಪಡೆಯಾಗುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಪೀರ್ಜಾದಾ ಮೊಹಮ್ಮದ್ ಸಯೀದ್, ಮುಜಾಫರ್ ಪರ್ರೆ ಮತ್ತು ಬಲ್ವಾನ್ ಸಿಂಗ್ ಸೇರಿದಂತೆ ಹಲವು ಹಿರಿಯ ನಾಯಕರು ಶುಕ್ರವಾರ ಪಕ್ಷಕ್ಕೆ ಮರಳಿದ್ದಾರೆ.
ಕಾಂಗ್ರೆಸ್ ನಿಷ್ಠವಂತ ನಾಯಕರಾಗಿದ್ದ ಚಾಂದ್ ಮತ್ತು ಬಲ್ವಾನ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಡೆಮಾಕ್ರಟಿಕ್ ಆಜಾದ್ ಪಾರ್ಟಿ (ಡಿಎಪಿ) ಸೇರಿದ್ದರು. ಆದರೆ ಆಜಾದ್ ಕಳೆದ ತಿಂಗಳು ಅವರಲ್ಲಿ ಕೆಲವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಡಿಎಪಿಯಿಂದ ಹೊರಹಾಕಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಪಾಲಿಗೆ ಇದೊಂದು ದೊಡ್ಡ ದಿನ. ನಾಯಕ ರುಪುನಃ ಪಕ್ಷಕ್ಕೆ ಹಿಂತಿರುಗಿದ್ದ ಸಂತಸ ತಂದಿದೆ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಎಐಸಿಸಿ ರಾಜ್ಯ ಉಸ್ತುವಾರಿ ರಜನಿ ಪಾಟೀಲ್ ಸೇರಿದಂತೆ ಅನೇಕ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಶಿವಮೊಗ್ಗ: ಸಾಗರದಲ್ಲಿ ಬಿಸಿಯೂಟ ಸೇವಿಸಿದ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ – ಲೋಕಾಯುಕ್ತ ಬಿ.ಎಸ್.ಪಾಟೀಲ್ ಎಚ್ಚರಿಕೆ
ಶಿವಮೊಗ್ಗ: ಸಾಗರದಲ್ಲಿ ಬಿಸಿಯೂಟ ಸೇವಿಸಿದ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು