ಹಾವೇರಿ: ಇಂದಿನಿಂದ ಹಾವೇರಿಯಲ್ಲಿ ಮೂರು ದಿನಗಳ ಸಾಹಿತ್ಯ ಸಮ್ಮೇಳನದಲ್ಲಿ ಅಕ್ಷರ ಜಾತ್ರೆಯೇ ನಡೆಯಲಿದೆ. ಇಂದು ಆರಂಭಗೊಂಡಂತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷೀಯ ಭಾಷಣದಲ್ಲಿಯೇ ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಸಾಹಿತಿ ದೊಡ್ಡರಂಗೇಗೌಡರು ವಾಗ್ಧಾಳಿ ನಡೆಸಿದರು.
ಹಾವೇರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣದಲ್ಲಿ ಮಾತನಾಡಿದಂತ ಅವರು, ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನ ಮಾನ ದೊರೆತರೂ, ಇತರೇ ಭಾಷೆಗಳಿಗೆ ಹೋಲಿಕೆ ಮಾಡಿದರೇ ಕೇಂದ್ರ ಸರ್ಕಾರದಿಂದ ಸಿಕ್ಕ ಅನುದಾನ ಕಡಿಮೆಯೇ ಆಗಿದೆ ಎಂದು ಹೇಳಿದರು.
2012 ರಿಂದ 2020ರ ಅವಧಿಯಲ್ಲಿ ಸಂಸ್ಕೃತ ಭಾಷೆಗೆ ಕೇಂದ್ರವು ನೀಡಿದ ಅನುದಾನದ ಮೊತ್ತ ರೂ.643 ಕೋಟಿ ಆಗಿದೆ. ಇದೇ ಅವಧಿಯಲ್ಲಿ ಶಾಸ್ತ್ರೀಯ ಭಾಷಾ ಸ್ಥಾನಮಾದನ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಕನ್ನಡದ ಅಧ್ಯಯನ, ಸಂಶೋಧನೆಗಳಿಗೆ ಬಿಡುಗಡೆಯಾದ ಹಣ ಕೇವಲ 3 ಕೋಟಿ ರೂ. ತಮಿಳು ಭಾಷೆಗೆ ಈ ಅವಧಿಯಲ್ಲಿ ದೊರೆತ ಹಣ ರೂ.23 ಕೋಟಿ ಎಂದು ಅಂಕಿ ಅಂಶ ಸಹಿತ ಮಾಹಿತಿ ನೀಡಿದರು.
ಇನ್ನೂ ತಮಿಳು ಭಾಷೆಗೆ 2012 ರಿಂದ 2021ರ ವರೆಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನದ ಹಿನ್ನಲೆಯಲ್ಲಿ ಬಿಡುಗಡೆಯಾದ ಒಟ್ಟು ಹಣ 42 ಕೋಟಿ ರೂ ಎನ್ನುವ ಮಾಹಿತಿ ಇದೆ. ಇದು ಕನ್ನಡಕ್ಕೆ ನೀಡಲಾಗಿರುವ ಅನುದಾನ ಪರಿಸ್ಥಿತಿಯಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿಯೂ ಗಣನೀಯ ಸುಧಾರಣೆಯೇನೂ ಆಗಿಲ್ಲ ಎನ್ನುವುದು ನನಗಿರುವ ಮಾಹಿತಿ. ಹೆಚ್ಚೆಂದರೇ 2012 ರಿಂದ ಇಲ್ಲಿಯವರೆಗೆ ಐದಾರು ಕೋಟಿ ರೂಪಾಯಿ ಅನುದಾನ ಸಿಕ್ಕಿರಬಹುದು ಎಂದರು.
ಶಾಸ್ತ್ರೀಯ ಭಾಷೆಯ ಸ್ಥಾನ ಮಾನ ಪಡೆದರೂ ನಾವು ಏನೂ ಸಾಧಿಸಲು ಸಾಧ್ಯ ಎಂದು ಪ್ರಶ್ನಿಸಿದಂತ ಅವರು, ಡಬಲ್ ಇಂಜಿನ್ ಸರ್ಕಾರದ ಅನುಕೂಲತೆಗಳ ಬಗ್ಗೆ ಪದೇ ಪದೇ ಹೇಳುವ ಕೇಂದ್ರ ಸರ್ಕಾರವು ಕನ್ನಡಕ್ಕೆ ಮಾಡಿರುವ ಅನುಕೂಲ ಇದೆ ಏನು ಎಂದು ಕಿಡಿಕಾರಿದ್ದಾರೆ.
ಅನುದಾನದ ವಿಚಾರದಲ್ಲಿ ನನಗಿರುವ ಮಾಹಿತಿಯಲ್ಲಿ ತಪ್ಪಿದ್ದರೇ ಸರ್ಕಾರ, ಸಂಬಂಧಪಟ್ಟ ಸಚಿವರು ಅದನ್ನು ಸರಿಪಡಿಸಲಿ. ನಿಖರ ಮಾಹಿತಿಯನ್ನು ಹಂಚಿಕೊಳ್ಳಲಿ. ಆದರೇ ಒಂದಂತೂ ಸತ್ಯ, ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಕೇವಲ ಕಣ್ಣೊರೆಸುವ ತಂತ್ರವಾಗಿದೆಯೇ ಹೊರತು, ಭಾಷೆ, ಸಂಶೋಧನೆಯ ದೃಷ್ಠಿಯಿಂದ ಮಹತ್ತದ್ದೇನನ್ನು ಸಾಧಇಸಲು ಸಾಧ್ಯವಾಗಿಲ್ಲ ಎಂಬುದಾಗಿ ಗುಡುಗಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ಹಗರಣಗಳ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹಿಗ್ಗಾಮುಗ್ಗ ವಾಗ್ಧಾಳಿ
ಶಿವಮೊಗ್ಗ: ಸಾಗರದಲ್ಲಿ ಬಿಸಿಯೂಟ ಸೇವಿಸಿದ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು