ದಾವಣಗೆರೆ: ವಿಧಾನಸಭೆ ಚುನಾವಣೆ ಇನ್ನೇನು ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಕೈಗೊಂಡಿದೆ.
BIGG NEWS: ರಾಯಚೂರಿನಲ್ಲಿ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶಿಸಿದ ಗಾಲಿ ಜನಾರ್ದನ ರೆಡ್ಡಿ
ಬಿಜೆಪಿ ನಾಯಕರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಪ್ರಮುಖ ಮಠಗಳಿಗೆ ಭೇಟಿ ನೀಡಿ, ಶ್ರೀಗಳೊಂದಿಗೆ ಗುಪ್ತ ಸಮಾಲೋಚನೆ ನಡೆಸಿದ್ದಾರೆ.ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ಬಳಿ ಇರುವ ಕನಕ ಗುರು ಪೀಠಕ್ಕೆ ಜೆ.ಪಿ.ನಡ್ಡಾ ಭೇಟಿ ನೀಡಿ ನಿರಂಜನಾನಂದ ಪುರಿ ಶ್ರೀಯವರಿಗೆ ಶಾಲು ಹೊದಿಸಿ ಗೌರವಿಸಿದರು.
ಬಳಿಕ ಸ್ವಾಮೀಜಿಯವರೊಂದಿಗೆ ಮಠದಲ್ಲೇ ರಹಸ್ಯ ಮಾತುಕತೆ ನಡೆಸಿದರು. ಈ ವೇಳೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಭೈರತಿ ಬಸವರಾಜ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಜಿ.ಎಂ.ಸಿದ್ದೇಶ್ವರ್ ಇದ್ದರು.ಕನಕ ಗುರುಪೀಠದ ಭೇಟಿ ಬಳಿಕ ಹರಿಹರದ ಹನಗವಾಡಿ ಗ್ರಾಮದ ಬಳಿ ಇರುವ ಪಂಚಮಸಾಲಿ ಪೀಠಕ್ಕೆ ನಡ್ಡಾ ಭೇಟಿ ನೀಡಿದರು. ಮಠಕ್ಕಾಗಮಿಸಿದ ನಡ್ಡಾರಿಗೆ ಶ್ರೀಯವರು ವಿಭೂತಿ ಇಟ್ಟಿದ್ದು ವಿಶೇಷವಾಗಿತ್ತು.
BIGG NEWS: ರಾಯಚೂರಿನಲ್ಲಿ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶಿಸಿದ ಗಾಲಿ ಜನಾರ್ದನ ರೆಡ್ಡಿ