ಬಾಗಲಕೋಟೆ: ಓವರ್ ಟೇಕ್ ಮಾಡಲು ಹೋದಾಗ ಎರಡು ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಮೂದೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ಘಟನೆ ನಡೆದಿದೆ.,.20 ವರ್ಷದ ಗೋವಿಂದ್ ಪಾಟೀಲ್, 20 ವರ್ಷದ ಹನಮಂತ್ ಬೊಮ್ಮಕ್ಕನವರ್, 18 ವರ್ಷದ ಸದಾಶಿವ ಬೆಳಗಲಿ ಬಾಗಲಕೋಟೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಎರಡೂ ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋದಾಗ ದುರ್ಘಟನೆ ಸಂಭವಿಸಿದೆ.
ಮುಂದೆ ವೇಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್ ಗುದ್ದಿದ್ದರಿಂದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರ ಯಗೊಂಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.