ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ.08 ರಂದು ಬ್ಯಾಂಕ್-1 ರ ಬ್ರೇಕರ್ಗಳ ಸ್ಥಳಾಂತರ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18 & ಎಂಸಿಎಫ್-20 ಮಾರ್ಗಗಳ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತ್ರಿ ಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್, ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್ಆರ್ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರೆಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ( MESCOM ) ತಿಳಿಸಿದೆ.
ಸ್ವಾವಲಂಬಿ ಯೋಜನೆಯಡಿ ಅರ್ಜಿ ಆಹ್ವಾನ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿಗೆ ಸೇರಿದವರಾಗಿರಬೇಕು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ). ಅರ್ಜಿಯನ್ನು ಸೇವಾಸಿಂಧು ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಸಲ್ಲಿಸಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶ ರೂ.98,000/-ಗಳು ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು ಇರಬೇಕು.
ಹಿಂದುಳಿದ ವರ್ಗದ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಸೇವಾ ಕೇಂದ್ರಗಳಲ್ಲಿ ಜ.20 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ : 080-22374832/805077000476/7090400100 ಮತ್ತು ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಮಾಹಿತಿ ಪಡೆಯಬಹುದೆಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
BIGG NEWS: ಯುಎನ್ ಮಿಷನ್ ಗೆ ‘ಭಾರತೀಯ ಮಹಿಳಾ ಶಾಂತಿಪಾಲಕರ’ ದೊಡ್ಡ ತುಕಡಿ ಸೇರ್ಪಡೆ | India Women Peacekeepers
BREAKING NEWS: ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ: ಬಾಡಿ ವಾರೆಂಟ್ ಜಾರಿಗೊಳಿಸಿದ ಕೋರ್ಟ್ | Murugha Sri