ದೆಹಲಿ: ಉಸಿರಾಟದ ಸೋಂಕಿನಿಂದ ಬಳಲುತ್ತಿರುವ UPA ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲೆ ಮುಂದುವರಿದ ಚಿಕಿತ್ಸೆ ನೀಡಲಾಗುತ್ತಿದೆ, ಇದೀಗ ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿದೆ. ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ.