ಬೆಂಗಳೂರು: ಸುಮಾರು 13 ವರ್ಷಗಳಿಂದ ಗಣರಾಜ್ಯೋತ್ಸವ ಪರೇಡ್ನಲ್ಲಿ ರಾಜ್ಯದ ಸಂಸ್ಕೃತಿ ಮತ್ತು ಪರಂಪರೆಯನ್ನು ಸ್ಥಬ್ಧಚಿತ್ರ ಪ್ರದರ್ಶನಗೊಳ್ಳುತ್ತಿತ್ತು. ಆದರೆ ಈ ಬಾರಿ ಬೇರೆ ರಾಜ್ಯಗಳಿಗೂ ಅವಕಾಶ ಕೊಡವ ಹಿನ್ನೆಲೆಯಲ್ಲಿ ಕರ್ನಾಟಕ ಈ ಬಾರಿ ಅವಕಾಶವನ್ನು ಕಳೆದುಕೊಂಡಿದೆ.
ರಾಜ್ಯ ಸರ್ಕಾರದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿದೆ. ಇದರ ಪರಿಣಾಮವಾಗಿ ಜನವರಿ 26ರಂದು ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಗಣರಾಜ್ಯೋತ್ಸವ ದಿನದಂದು ಪರೇಡ್ನಲ್ಲಿ ಕರ್ನಾಟಕ 13 ವರ್ಷಗಳ ನಂತರ ಪ್ರತಿನಿಧಿಸುತ್ತಿಲ್ಲ ಎಂದು ತಿಳಿಸಿದ್ದಾರೆ.ತಜ್ಞರ ಸಮಿತಿಯ ಮೊದಲ ಕೆಲವು ಸುತ್ತಿನ ಮೌಲ್ಯಮಾಪನದಲ್ಲಿ ಕರ್ನಾಟಕ ಪ್ರತಿನಿಧಿಸಿದ್ದ ವಿಷಯಾಧಾರಿತ ವಿನ್ಯಾಸ ಹಾಗೂ ಸಂಗೀತವು ಮೆಚ್ಚುಗೆಯನ್ನು ಪಡೆದಿತ್ತು.
BIGG NEWS: ಕೊಪ್ಪಳದಲ್ಲಿ ಅಮಾನುಷ ಕೃತ್ಯ; ತಂದೆ ಮಾಡಿದ ಸಾಲ ತೀರಿಸಿಲ್ಲವೆಂದು ಬಾಲಕನಿಗೆ ಥಳಿತ
ಆದರೆ ಕೊನೆಯ ಸುತ್ತಿನಲ್ಲಿ ಕರ್ನಾಟಕದ ಸ್ಥಬ್ಧಚಿತ್ರನ್ನು ತಿರಸ್ಕರಿಸಲಾಗಿದೆ. ಅಲ್ಲದೇ ಇತರ ರಾಜ್ಯಗಳು ತಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ಹಲವು ವರ್ಷಗಳಿಂದ ಕೆಲವೇ ರಾಜ್ಯಗಳಿಗೆ ಅವಕಾಶವನ್ನು ನೀಡುತ್ತಿದ್ದಾರೆ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಹಿಂದೆ ಕರ್ನಾಟಕವು ಸ್ಥಬ್ಧಚಿತ್ರಕ್ಕಾಗಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿತ್ತು. ಅಷ್ಟೇ ಅಲ್ಲದೇ ಕೆಲವು ಸೃಜನಶೀಲ ಹಾಗೂ ವರ್ಣರಂಜಿತ ಸ್ಥಬ್ಧಚಿತ್ರಕ್ಕಾಗಿ ವ್ಯಾಪಕ ಮೆಚ್ಚುಗೆಯನ್ನು ಪಡೆದಿದೆ. 2022ರ ಗಣರಾಜ್ಯೋತ್ಸವದಂದು ಕರ್ನಾಟಕ ಪ್ರದರ್ಶಿಸಿದ್ದ ಸ್ಥಬ್ಧ ಚಿತ್ರಕ್ಕೆ 2ನೇ ಸ್ಥಾನ ಪಡೆದಿತ್ತು. ರಾಜ್ಯವು ಹೆಚ್ಚಾಗಿ ಜಾನಪದ, ಜೀವವೈವಿಧ್ಯ, ಕರಕುಶಲ ಈ ರೀತಿಯ ವಿಷಯವನ್ನೆ ಹೆಚ್ಚು ಕೇಂದ್ರಿಕರಿಸುತ್ತಾ ಬಂದಿದೆ