ಬೆಂಗಳೂರು: ಸದ್ಯ ಬಿಎಂಟಿಸಿ ಬಸ್ ಬೆಂಗಳೂರು ನಗರ , ಗ್ರಾಮಾಂತರ ಜಿಲ್ಲೆಗಳಿಗೆ ಮಾತ್ರ ಓಡಾಡುತ್ತಿತ್ತು. ಆದರೆ ಇದೀಗ ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿಬಸ್ ವಿಸ್ತರಣೆಯಾಗಿದೆ.
ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡಿದ್ದಾರೆ. ಆದ್ರೆ ಇದರಿಂದ ಎಚ್ಚೆತ್ತ ಕೆಎಸ್ಆರ್ಟಿಸಿ ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿ.ಮೀ ಅಂತರವಿದೆ. ಹೀಗಾಗಿ ಬಸ್ ಸಂಚಾರ ವಿಸ್ತರಿಸಲು ಅವಕಾಶ ಇಲ್ಲ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.
BREAKING NEWS: ಗಣರಾಜ್ಯೋತ್ಸವ ಪರೇಡ್ನಲ್ಲಿ ಈ ಬಾರಿ ಇರಲ್ಲ ಕರ್ನಾಟಕದ ಸ್ತಬ್ಧಚಿತ್ರ
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ಇದೆ. ಆದರೆ ಚಿಕ್ಕಬಳ್ಳಾಪುರಕ್ಕೂ ಸಂಚಾರ ವಿಸ್ತರಣೆ ಮಾಡಿರುವ ಹಿನ್ನಲೆ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕೆಎಸ್ಆರ್ಟಿಸಿ ಅಧಿಕಾರಿಗಳು BMTC ನಡೆ ಖಂಡಿಸಿ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಎಂಟಿಸಿ ಸಂಚಾರ ಮಾಡಿದರೆ KSRTCಗೆ ಆದಾಯಕ್ಕೆ ಹೊಡೆತ ಬೀಳುವ ಭೀತಿ ಹಿನ್ನಲೆ ಪತ್ರ ಬರೆಯಲು ಮುಂದಾಗಿದ್ದಾರೆ.
BREAKING NEWS: ಗಣರಾಜ್ಯೋತ್ಸವ ಪರೇಡ್ನಲ್ಲಿ ಈ ಬಾರಿ ಇರಲ್ಲ ಕರ್ನಾಟಕದ ಸ್ತಬ್ಧಚಿತ್ರ