ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಿಸಿದ್ದ ದೇಶದ ಪ್ರಥಮ ರ್ಯಾಪಿಡ್ ರಸ್ತೆಯಲ್ಲಿ ಬಿರುಕು ಬಿಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ ಒಂದೇ ತಿಂಗಳಲ್ಲೆ ರ್ಯಾಪಿಡ್ ರಸ್ತೆಯಲ್ಲಿ ಬಿರುಕು ಬಿಟ್ಟಿದೆ.
ಬೆಂಗಳೂರಿನ ಹಳೇ ಮದ್ರಾಸ್ ರಸ್ತೆಯಲ್ಲಿ ರ್ಯಾಪಿಡ್ ರಸ್ತೆ ನಿರ್ಮಿಸಲಾಗಿತ್ತು. ಕೋಟ್ಯಂತರ ಹಣ ಖರ್ಚು ಮಾಡಿ ರ್ಯಾಪಿಡ್ ರಸ್ತೆಯನ್ನು ಬಿಬಿಎಂಪಿ ನಿರ್ಮಿಸಿತ್ತು. ಆದರೆ ಇದೀಗ ಕಳಪೆ ಕಾಮಗಾರಿಯಿಂದ ರ್ಯಾಪಿಡ್ ರಸ್ತೆಯಲ್ಲಿ ಬಿರುಕು ಬಿಟ್ಟಿದೆ ಎಂದು ಆರೋಪ ಕೇಳಿಬಂದಿದೆ.
ಹಳೇ ಮದ್ರಾಸ್ ರಸ್ತೆಯಲ್ಲಿ 337.5 ಮೀಟರ್ ರಸ್ತೆಯನ್ನು ‘ಪ್ರೀಕಾಸ್ಟ್ ಪೋಸ್ಟ್ ಟೆನ್ಷನಿಂಗ್ ಕಾಂಕ್ರೀಟ್ ಪೇವ್ಮೆಂಟ್’ ತಂತ್ರಜ್ಞಾನದ ‘ರ್ಯಾಪಿಡ್ ರಸ್ತೆ’ಯನ್ನು ಪ್ರಾಯೋಗಿಕವಾಗಿ ನಿರ್ಮಿಸಲಾಗಿದೆ.
ಈ ‘ರ್ಯಾಪಿಡ್ ರಸ್ತೆ’ ಮೂರ್ನಾಲ್ಕು ಕಡೆ ಬಿರುಕು ಬಿಟ್ಟಿದೆ. ಪ್ರೀಕಾಸ್ಟ್ ಪ್ಯಾನೆಲ್ ನಿರ್ಮಾಣದಲ್ಲಿ ಗುಣಮಟ್ಟದ ಸಿಮೆಂಟ್ ಮಿಶ್ರಣ ಇಲ್ಲದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಕ್ಷಿಪ್ರವಾಗಿ ರಸ್ತೆ ನಿರ್ಮಾಣವಾಗುತ್ತದೆ ಎಂದು ಸಂತಸದಲ್ಲಿದ್ದ ನಾಗರಿಕರು ಇದೀಗ ಕಳಪೆ ಕಾಮಗಾರಿಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
BIGG NEWS: ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಹಕ್ಕಿಜ್ವರ ಹಿನ್ನೆಲೆ; ಚಾಮರಾಜನಗರದಲ್ಲಿ ಕಟ್ಟೆಚ್ಚರ