ಕಾಸರಗೋಡು (ಕೇರಳ): ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಬಿರಿಯಾನಿ ಸೇವಿಸಿದ ಬಳಿಕ ಯುವತಿ ಸಾವನ್ನಪ್ಪಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ವರದಿಯಾಗಿದೆ.
ಮೃತ ಯುವತಿಯನ್ನು ಅಂಜು ಶ್ರೀಪಾರ್ವತಿ (20) ಎಂದು ಗುರುತಿಸಲಾಗಿದೆ. ಈಕೆ ಡಿ.31 ರಂದು ಕಾಸರಗೋಡಿನ ರೊಮ್ಯಾನ್ಸಿಯಾ ಎಂಬ ರೆಸ್ಟೊರೆಂಟ್ನಿಂದ ಆನ್ಲೈನ್ನಲ್ಲಿ’ಕುಜಿಮಂತಿ’ ಎಂಬೆಸರಿನ ಬಿರಿಯಾನಿ ಖಾದ್ಯವಾದ ಆರ್ಡರ್ ಮಾಡಿದ್ದರು.
ಇದಾದ ನಂತರ ಯುವತಿ ಆರೋಗ್ಯದಲ್ಲಿ ಕೊಂಚ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಆಕೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಯುವತಿ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದದಿದೆ.
ಘಟನೆ ಸಂಬಂಧ ಯುವತಿಯ ಪೋಷಕರು ದೂರು ನೀಡಿದ್ದು, ಪೊಲೀಸರು ಪ್ರಕರಣ ತನಿಖೆ ಕೈಗೊಂಡಿದ್ದು, ವಿಧಿವಿಜ್ಞಾನ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ.
ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಆಹಾರ ಸುರಕ್ಷತಾ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ಘಟನೆ ಮತ್ತು ಯುವತಿಗೆ ನೀಡಿದ ಚಿಕಿತ್ಸೆಯ ಬಗ್ಗೆಯೂ ಡಿಎಂಒ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಜಾರ್ಜ್ ಪತ್ತನಂತಿಟ್ಟದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಆಹಾರ ವಿಷದ ಆರೋಪ ಹೊತ್ತಿರುವ ಹೋಟೆಲ್ಗಳ ಪರವಾನಗಿಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ (ಎಫ್ಎಸ್ಎಸ್ಎ) ಅಡಿಯಲ್ಲಿ ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ವಾರದ ಆರಂಭದಲ್ಲಿ, ಕೊಟ್ಟಾಯಂ ವೈದ್ಯಕೀಯ ಕಾಲೇಜಿನ ನರ್ಸ್ ಕೋಝಿಕ್ಕೋಡ್ನ ಉಪಾಹಾರ ಗೃಹದಿಂದ ಆಹಾರವನ್ನು ಸೇವಿಸಿದ ನಂತರ ಸಾವನ್ನಪ್ಪಿದ್ದ ಘಟನೆ ವರದಿಯಾಗಿತ್ತು.
BIGG NEWS: ಪ್ರೀತ್ಸೆ, ಪ್ರೀತ್ಸೆ ಎಂದು ಕಾಟ ಕೊಡುತ್ತಿದ್ದ ಪಾಗಲ್ ಪ್ರೇಮಿ; ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣು