ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ಸಭೆ ಆಗ ವಿಸ್ತರಣೆ ಆಗಲಿದೆ, ಈಗ ವಿಸ್ತರಣೆ ಆಗಲಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಇನ್ನೂ ವಿಸ್ತರಣೆ ಆಗಿಲ್ಲ. ಇದೀಗ ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕೇಂದ್ರದ ನಾಯಕರೊಂದಿಗೆ ಚರ್ಚಿಸಲಾಗಿದೆ. ಈ ಬಗ್ಗೆ ಶೀಘ್ರವೇ ಸಭೆ ನಡೆಸಿ, ಸಂಪುಟ ವಿಸ್ತರಣೆಯ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿದರು.
ಮತ್ತೊಂದೆಡೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, 2-3 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂಬುದು ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ ಎಂದರು.
ಖಾದಿ ಪ್ರಿಯರೇ ಗಮನಿಸಿ: ಜ.26ರಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಖಾದಿ ಉತ್ಸವ