ಶಿವಮೊಗ್ಗ: ಈಗಾಗಲೇ ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇದ್ದಂತ 15,000 ಶಿಕ್ಷಕರ ಹುದ್ದೆಗಳ ನೇಮಕಾತಿ ( Teacher Recruitment ) ಬಳಿಕ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೆ ರಾಜ್ಯ ಪ್ರೌಢ ಶಾಲೆಗಳಲ್ಲಿ ( High School ) ಖಾಲಿ ಇರುವಂತ 250 ದೈಹಿಕ ಶಿಕ್ಷಕರು ಸೇರಿದಂತೆ 2,500 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಫೆಬ್ರವರಿಯಲ್ಲಿ ರಾಜ್ಯದ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ 250 ದೈಹಿಕ ಶಿಕ್ಷಕರು ಸೇರಿದಂತೆ 2,500 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದರು. ಈ ಮೂಲಕ ಶಿಕ್ಷಕರ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಮೌಲ್ಯ ಶಿಕ್ಷಣ ಅನುಷ್ಠಾನ ಕುರಿತು ದುಂಡು ಮೇಜಿನ ಸಮಾಲೋಚನಾ ಸಭೆ: ಶಿಕ್ಷಣ ತಜ್ಞರು, ಧಾರ್ಮಿಕ ಮುಖಂಡರು, ಚಿಂತಕರು ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭಾಗಿ
ಬೆಂಗಳೂರು: ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣವನ್ನು ಅನುಷ್ಠಾನಗೊಳಿಸುವ ಉದ್ದೇಶದೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಸೋಮವಾರ (ಜ.9) ದುಂಡು ಮೇಜಿನ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಸಮಾಲೋಚನಾ ಸಭೆಯಲ್ಲಿ ಸಚಿವರು, ಶಿಕ್ಷಣ ತಜ್ಞರು, ವಿವಿಧ ಧಾರ್ಮಿಕ ಗುರುಗಳು, ಚಿಂತಕರು, ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.
‘ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣವನ್ನು ಅಳವಡಿಸುವ ಕುರಿತು ಅಭಿಪ್ರಾಯ/ಸಲಹೆಗಳನ್ನು ಸಂಗ್ರಹಿಸಲು ಈ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ವ್ಯಕ್ತವಾಗುವ ಅಂಶಗಳ ಆಧಾರದ ಮೇಲೆ ಇಲಾಖಾ ಹಂತದಲ್ಲಿ ಆಯೋಜಿಸುವ ಸಭೆಗಳಲ್ಲಿ ಚರ್ಚಿಸಿ ‘ಮೌಲ್ಯ ಶಿಕ್ಷಣ’ದ ಅನುಷ್ಠಾನದ ವಿಧಾನಗಳನ್ನು ಅಂತಿಮಗೊಳಿಸಲಾಗುತ್ತದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.
Good News : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ; ತೆರಿಗೆದಾರರಿಗೆ ಬಿಗ್ ರಿಲೀಫ್, ಅವಧಿ ವಿಸ್ತರಣೆ |Income Tax