ನವದೆಹಲಿ: ದೆಹಲಿಯ ಸದರ್ ಬಜಾರ್ನಲ್ಲಿರುವ ಕಟ್ಟಡವೊಂದರಲ್ಲಿ ಶಂಕಿತ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.
ಇಂದು ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ತೆರಳಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂದು ತಿಳಿದು ಬಂದಿದೆ.
Delhi | One person injured in a structural collapse of stairs in a building in Sadar Bazar, today.
Prima facie,it seems to be from a blast caused by the water pipe. No soot or fire or pellets or smell of any chemical observed;Crime&FSL teams on their way to the site, say Police. pic.twitter.com/06dV23cCPo
— ANI (@ANI) January 7, 2023
ವಿವರಗಳ ಪ್ರಕಾರ, ದೆಹಲಿಯ ಖುರ್ಶೀಡ್ ಮಾರುಕಟ್ಟೆಯ ಪಕ್ಕದಲ್ಲಿರುವ ಸದರ್ ಬಜಾರ್ನ ನ್ಯೂ ಪಾರ್ಕಿಂಗ್ನಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ‘ಗಿಡ’ದಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ತಿಳಿದ್ರೆ, ಹುಡುಕಿ ತರ್ತಿರಾ.!
ಚಿಕ್ಕಬಳ್ಳಾಪುರ ಉತ್ಸವ: ಜನರ ಬದುಕಿನ ಭವಿಷ್ಯವನ್ನು ಬರೆಯಲು ಮುನ್ನುಡಿ – ಸಿಎಂ ಬಸವರಾಜ ಬೊಮ್ಮಾಯಿ