ಬೆಂಗಳೂರು : ವಿಧಾನಸೌಧದ ಎದುರು ಬಸವೇಶ್ವರರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನುಪ್ರತಿಷ್ಠಾಪಿಸುವ ಸಂಬಂಧ ಕಂದಾಯ ಸಚಿವ ಅರ್. ಅಶೋಕ್ ಹಾಗೂ ಸಚಿವ ಸಿ.ಸಿ. ಪಾಟೀಲ್ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ಸೂಚನೆಯಂತೆ ಕಂದಾಯ ಸಚಿವ ಆರ್. ಅಶೋಕ್ ಮತ್ತು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ಶನಿವಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀಲನಕ್ಷೆ ಪರಿಶೀಲಿಸಿ, ಸ್ಥಳಕ್ಕೆ ಜಂಟಿಯಾಗಿ ಭೇಟಿ ನೀಡಿ ತಪಾಸಣೆ ನಡೆಸಿದರು.
ಬಸವಣ್ಣನವರ ಮತ್ತು ಕೆಂಪೇಗೌಡರ ಪ್ರತಿಮೆಗಳ ಮಾದರಿಯನ್ನು ಸಿದ್ಧಪಡಿಸಿ ವಿಧಾನಸೌಧದ ಮುಂಭಾಗದಲ್ಲಿ ಸೂಕ್ತ ಸ್ಥಳ ನಿಗದಿಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿತ್ತು. ಅದರಂತೆ ಅವರು ಸಿದ್ಧಪಡಿಸಿಕೊಂಡು ತಂದಿರುವ ನೀಲನಕ್ಷೆ ಮತ್ತು ಪ್ರತಿಮೆಗಳ ಮಾದರಿಗಳನ್ನು ಉಭಯ ಸಚಿವರೂ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
BIGG NEWS: ಹಾಸನದಲ್ಲಿ ನಿಲ್ಲಿಸಿದ್ದ ಬೈಕ್ ನಲ್ಲಿ ಬೆಂಕಿ; ನೋಡ ನೋಡುತ್ತಿದ್ದಂತೆಯೇ ಧಗ ಧಗ