ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿಗೂ ಸ್ಯಾಂಟ್ರೊ ರವಿ ಎಂಬಾತನಿಗೂ ಯಾವುದೇ ಸಂಬಂಧವಿಲ್ಲ ಎಂದು ಕರ್ನಾಟಕ ಬಿಜೆಪಿ ಟ್ವೀಟರ್ ಮಾಡಿ ಸ್ಪಷ್ಟಪಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಸಿಎಂ ಬೊಮ್ಮಾಯಿಯವರಿಗಾಗಲಿ, ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗಾಗಲಿ ಸ್ಯಾಂಟ್ರೊ ರವಿ ಎಂಬಾತನ ಜೊತೆ ಯಾವುದೇ ಸಂಬಂಧವಿರುವುದಿಲ್ಲ. ವಿರೋಧ ಪಕ್ಷಗಳ ಸುಳ್ಳಿನ ಕಾರ್ಖಾನೆಗಳಲ್ಲಿ ತಯಾರಾದ ಪ್ರಾಡಕ್ಟ್ಗಳಿವು ಎಂದು ಹೇಳಿದೆ.
ಮುಖ್ಯಮಂತ್ರಿ ಶ್ರೀ @BSBommaiಯವರಿಗಾಗಲಿ, ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗಾಗಲಿ ಸ್ಯಾಂಟ್ರೊ ರವಿ ಎಂಬಾತನ ಜೊತೆ ಯಾವುದೇ ಸಂಬಂಧವಿರುವುದಿಲ್ಲ. ವಿರೋಧ ಪಕ್ಷಗಳ ಸುಳ್ಳಿನ ಕಾರ್ಖಾನೆಗಳಲ್ಲಿ ತಯಾರಾದ ಪ್ರಾಡಕ್ಟ್ಗಳಿವು.
— BJP Karnataka (@BJP4Karnataka) January 7, 2023
ಮುಖ್ಯಮಂತ್ರಿಗಳ ಮನೆಗೆ ಅನೇಕರು ಬಂದು ಹೋಗುತ್ತಾರೆ. ಅಲ್ಲಿ ಬಂದವರು ಸಿಎಂ ಹಾಗೂ ಅವರ ಕುಟುಂಬದ ಜೊತೆ ಫೋಟೋ ತೆಗೆಸಿಕೊಂಡು ಹೋಗುವುದು ಸಾಮಾನ್ಯ. ಸ್ಯಾಂಟ್ರೊ ರವಿ ಎಂಬಾತ ಕೂಡ ಅದೇ ರೀತಿ ಫೋಟೋ ತೆಗೆಸಿಕೊಂಡಿರಬಹುದು ಎಂದು ಟ್ವೀಟ್ ಮಾಡಿದೆ.