ಬೆಳಗಾವಿ:ಬೆಳಗಾವಿಯ ನಾವಗೆ ಗ್ರಾಮದಲ್ಲಿ ಸುಮಾರು 30 ಜನರ ಗುಂಪೊಂದು ನಾಲ್ಕು ಮನೆಗಳನ್ನು ಧ್ವಂಸಗೊಳಿಸಿದೆ ಮತ್ತು ವಾಹನಗಳಿಗೆ ಕಲ್ಲು ತೂರಾಟ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ದಾಳಿಗೆ ಗುರಿಯಾದವರಲ್ಲಿ ಮಾಜಿ ಮತ್ತು ಹಾಲಿ ಪಂಚಾಯತ್ ಸದಸ್ಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಲೆ ಗ್ರಾಮದ ಹೈಸ್ಕೂಲ್ ವಿದ್ಯಾರ್ಥಿನಿ ಹಾಗೂ ನಾವಗೆ ಗ್ರಾಮದ ಕಾಲೇಜು ಹುಡುಗನ ನಡುವಿನ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಇದರಿಂದ ಕುಪಿತಗೊಂಡ ಗುಂಪು ಬಂದೂಕು, ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಹುರಕಡ್ಲಿ ಅವರ ಮನೆ ಹಾಗೂ ಇತರರ ಮನೆ ಧ್ವಂಸ ಮಾಡಿದೆ.
ಅಹಿತಕರ ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಡಿಸಿಪಿ ರೋಹನ್ ಜಗದೀಶ್, ಗ್ರಾಮಾಂತರ ಎಸಿಪಿ ಗಿರೀಶ್ ಎಚ್.ವಿ ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಾಹಿತಿ ಪಡೆದ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.