ಬೆಂಗಳೂರು: ಮತದಾರರಿಗೆ ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು 12 ವಾರಗಳ ಕಾಲ ಮುಂದೂಡಿಕೆ ಮಾಡಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮತದಾರರಿಗೆ ಉಚಿತ ಗ್ಯಾರಂಟಿಯ ಮೂಲಕ ಆಮಿಷ ಒಡ್ಡಲಾಗಿದೆ. ಇವುಗಳನ್ನು ನಿರ್ಬಂಧಿಸುವಂತೆ ಹೈಕೋರ್ಟ್ ಗೆ ಬ್ರಿಗೆಡಿಯರ್ ರವಿ ಮುನಿಸ್ವಾಮಿ ಹಾಗೂ ಮತ್ತಿತರರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು.
ಇದೇ ರೀತಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೂ ಸಲ್ಲಿಸಲಾಗಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಅದರ ವಿಚಾರಣೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಹೈಕೋರ್ಟ್ 12 ವಾರಗಳ ಕಾಲ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.
ಅಂದಹಾಗೇ ಹೈಕೋರ್ಟ್ ಗೆ ಸಲ್ಲಿಸಲಾಗಿರುವಂತ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಹಾಗೂ ಮತ್ತಿತರರ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯಲ್ಲಿ, ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳಿಂದ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಆಮಿಷ ಒಡ್ಡುವ ಅಭ್ಯರ್ಥಿ, ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು.
ಇದಲ್ಲದೇ ಜನರ ತೆರಿಗೆ ಹಣ ಅಧಿಕಾರ ಲಾಲಸೆಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬೊಕ್ಕಸದ ಹಣ ದೇಶದ ಅಭಿವೃದ್ಧಿಗೆ ಬದಲು ಆಮಿಷಕ್ಕೆ ಬಳಕೆಯಾಗುತ್ತಿದೆ. ಮತದಾರರಿಗೆ ಪ್ರಲೋಭನೆ ಒಡ್ಡಿ ಮತ ಕೇಳುವುದು ಸಂವಿಧಾನ ಬಾಹಿರವಾಗಿದೆ. ಈ ಕುರಿತಂತೆ ಮಾರ್ಗಸೂಚಿ ರೂಪಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್ ಗೆ ಪಿಐಎಲ್ ನಲ್ಲಿ ಕೋರಲಾಗಿತ್ತು.
BREAKING: ನನ್ನನ್ನು ಸಾಯಿಸಲು ಹೊಂಚು ಹಾಕಿಸ್ತಿದ್ದಾರೆ – ವಿದ್ಯಾಧರನಾಥಶ್ರೀ ಗಂಭೀರ ಆರೋಪ
BIG NEWS: ರಾಮಜನ್ಮಭೂಮಿ ಹೋರಾಟಗಾರ ‘ಶ್ರೀಕಾಂತ್ ಪೂಜಾರಿ’ ಬಂಧನ ಪ್ರಕರಣ: ಬರೋಬ್ಬರಿ 15 ಕೇಸ್ ದಾಖಲು