ದಾವಣಗೆರೆ: ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯ ದಿನಪತ್ರಿಕೆ ವಿತರಣಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲಾ ಪತ್ರಿಕಾ ವಿತರಕರು ಇ-ಶ್ರಮ್ ಪೋರ್ಟಲ್‍ನಲ್ಲಿ ಸ್ವಯಂ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 (24*7), ಕಾರ್ಮಿಕ ಅಧಿಕಾರಿಗಳು,ಕಾರ್ಮಿಕÀ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
***********************************************************
ಶೇ.50% ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ
ಕನ್ನಡ ಪುಸ್ತಕ ಪ್ರಾಧಿಕಾರವು ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ 2024ರ ಜನವರಿ ತಿಂಗಳಲ್ಲಿ ಪ್ರಾಧಿಕಾರ ಮಳಿಗೆ ಶೇ.50%ರ ರಿಯಾಯಿತಿ ದರಗಳಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುವುದು.
ಪುಸ್ತಕ ಪ್ರಿಯರು ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ದೂ.08022107705), ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮತ್ತು ಕನ್ನಡ ಪುಸ್ತಕಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ಪಡೆಯಬಹುದು.
ಪ್ರಾಧಿಕಾರದ ಆನ್‍ಲೈನ್ www.kannadapustakapradhikara.com ಮೂಲಕವು ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಪಡೆಯಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.