ಬೆಂಗಳೂರು: ಬಿಜೆಪಿಯಿಂದ ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನ ಶುರುವಾಗಿದ್ದು, ಈ ಮೂಲಕ ರಾಜ್ಯ ಸರ್ಕಾರದ ವಿರುದ್ದ ಸಮರ ಸಾರಿದ್ದಾರೆ ಬಿಜೆಪಿ ನಾಯಕರುಗಳು.
ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಏಕಾಂಗಿ ಪ್ರತಿಭಟನೆ ನಡೆಸಿದರು. ಅವರು ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ಮಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಅವರನ್ನು ಪೊಲೀಸರು ತಮ್ಮ ವಶಕ್ಕೆ ತೆಗದುಕೊಂಡ ಘಟನೆ ಕೂಡ ನಡೆಯಿತು. ಶ್ರೀಕಾಂತ್ ಪೂಜಾರಿ ಬಂಧನದ ಹಿನ್ನೆಲೆಯಲ್ಲಿ ಬಿಜೆಪಿ ಬುಧವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ. ಇದಲ್ಲದೇ ಚಿಕ್ಕಮಗಳೂರಿನಲ್ಲಿ ಕೂಡ ಠಾಣೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ ಸಿಟಿ ರವಿಯವರನ್ನು ಕೂಡ ಪೊಲೀಸರು ಮುಂಜಾಗ್ರತ ಕ್ರಮವಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಅಯೋಧ್ಯೆ ಕರ ಸೇವಕನ ಬಂಧಿಸಿದ ಹಿಂದು ವಿರೋಧಿ, ರಾಮ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಹೋರಾಟ ಪ್ರಾರಂಭಿಸಿದ್ದೇನೆ.
ಹಿಂದು ವಿರೋಧಿ ಸರ್ಕಾರ ನನ್ನನ್ನು ಬಂಧಿಸಿ ಹೋರಾಟ ಹತ್ತಿಕ್ಕುವ ಹತಾಶ ಪ್ರಯತ್ನ ಮುಂದುವರಿಸಿದೆ.#ನಾನೊಬ್ಬಕರಸೇವಕನನ್ನನ್ನುಬಂಧಿಸಿ pic.twitter.com/fHYRYWZ69S— Sunil Kumar Karkala (@karkalasunil) January 4, 2024