ಬೆಂಗಳೂರು: ಈಗಾಗಲೇ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದಿಂದ ದತ್ತಪೀಠ ಹೋರಾಟಗಾರರ ವಿರುದ್ಧದ ಹಳೇ ಕೇಸ್ ಈಗ ರೀ ಓಪನ್ ಮಾಡಲಾಗಿದೆ.
2017ರಲ್ಲಿ ಚಿಕ್ಕಮಗಳೂರಿನ ದತ್ತಪೀಠದಲ್ಲಿ ಗೋರಿ ಧ್ವಂಸಗೊಳಿಸಿದಂತ ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ 14 ಮಂದಿಯ ವಿರುದ್ಧ ಕೇಸ್ ದಾಖಲಾಗಿತ್ತು. ಆದ್ರೇ ಈ ಹಿಂದಿನ ಬಿಜೆಪಿ ಸರ್ಕಾರ ಈ ಕೇಸ್ ಕ್ಲೋಸ್ ಮಾಡಲಾಗಿತ್ತು.
ಬರೋಬ್ಬರಿ 7 ವರ್ಷಗಳ ಬಳಿಕ ಇದೀಗ ರಾಜ್ಯ ಸರ್ಕಾರ ದತ್ತಪೀಠ ಹೋರಾಟಗಾರರ ವಿರುದ್ಧದ ಹಳೇ ಕೇಸ್ ರೀ ಓಪನ್ ಮಾಡಲಾಗಿದೆ. 14 ಜನರ ವಿರುದ್ಧದ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ.
ದತ್ತಪೀಠ ಹೋರಾಟಗಾರರಾದಂತ ನಾಗೇಂದ್ರ ಪೂಜಾರಿ, ಲೋಕೇಶ್, ಮಹೇಂದ್ರ, ಸಂದೀಪ್, ರಾಮು, ತುಡುಕೂರು ಮಂಜು, ಶಿವರಾಜ್, ಸಂದೇಶ್ ಸೇರಿದಂತೆ 14 ಮಂದಿಯ ವಿರುದ್ಧದ ಕೇಸ್ ರೀ ಓಪನ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ.8ರಂದು ಕೋರ್ಟ್ ಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ ಎಂದು ಹೇಳಲಾಗುತ್ತಿದೆ.
ʻಪರಿಶಿಷ್ಟ ಜಾತಿಯ ಉದ್ದಿಮೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ʻMSMEʼ ಘಟಕ ಸ್ಥಾಪನೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
Good News : ‘ಕನಿಷ್ಠ ಬ್ಯಾಲೆನ್ಸ್’ ವಿಷಯದಲ್ಲಿ ‘RBI’ ಮಹತ್ವದ ನಿರ್ಧಾರ : ಈ ಖಾತೆದಾರರಿಗೆ ಬಿಗ್ ರಿಲೀಫ್