ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಸಂಚಾಲಕರು, ಸಹ-ಸಂಚಾಲಕರು ಹಾಗೂ ವಕ್ತಾರರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶಿಸಿದ್ದಾರೆ.
ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಭಾರತೀಯ ಜನತಾ ಪಾರ್ಟಿಯ ಸಾಮಾಜಿಕ ಜಾಲತಾಣ ಸಂಚಾಲಕರು, ಸಹ-ಸಂಚಾಲಕರು, ಮಾಹಿತಿ ತಂತ್ರಜ್ಞಾನ ವಿಭಾಗ, ಸಹ ಸಂಚಾಲಕರು ಮತ್ತು ಮಾಧ್ಯಮ ವಿಭಾಗದ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ.
ಸಾಮಾಜಿ ಜಾಲತಾಣದ ಸಂಚಾಲಕರಾಗಿ ಪ್ರಶಾಂತ್ ಮಾಕನೂರು, ಸಹ ಸಂಚಾಲಕರನ್ನಾಗಿ ನರೇಂದ್ರ ಮೂರ್ತಿಯವರನ್ನು, ಮಾಹಿತಿ ತಂತ್ರಜ್ಞಾನ ವಿಭಾಗ(IT)ಯ ಸಂಚಾಲಕರಾಗಿ ನಿತಿನ್ ರಾಜ್ ನಾಯಕ್, ಸಹ ಸಂಚಾಲಕರಾಗಿ ಶ್ಯಾಮಲಾ ರಘುನಂದನ್ ನೇಮಿಸಲಾಗಿದೆ.
ಮಾಧ್ಯಮ ವಿಭಾಗದ (IT)ಯ ಸಂಚಾಲಕರಾಗಿ ಕರುಣಾಕರ ಖಾಸಲೆ ಹಾಗೂ ಸಹ ಸಂಚಾಲಕರಾಗಿ ಪ್ರಶಾಂತ್ ಕೆಡಂಜಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಇದಲ್ಲದೇ ಬಿಜೆಪಿಯ ಮುಖ್ಯ ವಕ್ತಾರರನ್ನಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ನೇಮಕ ಮಾಡಲಾಗಿದೆ. ವಕ್ತಾರರನ್ನಾಗಿ ಹರಿಪ್ರಕಾಶ್ ಕೊಣೆಮನೆ, ಛಲವಾದಿ ನಾರಾಯಣಸ್ವಾಮಿ, ಡಾ.ತೇಜಸ್ವಿನಿಗೌಡ, ಕೆ.ಎಸ್ ನವೀನ್, ಎಂ.ಜಿ ಮಹೇಶ್, ಹೆಚ್.ಎನ್ ಚಂದ್ರಶೇಖರ್, ಡಾ.ನರೇಂದ್ರ ರಂಗಪ್ಪ, ಕು.ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ ಗೌಡ ಹಾಗೂ ಹೆಚ್.ವೆಂಕಟೇಶ್ ದೊಡ್ಡೇರಿಯವನ್ನು ನೇಮಕ ಮಾಡಲಾಗಿದೆ.
Good News : ‘ಕನಿಷ್ಠ ಬ್ಯಾಲೆನ್ಸ್’ ವಿಷಯದಲ್ಲಿ ‘RBI’ ಮಹತ್ವದ ನಿರ್ಧಾರ : ಈ ಖಾತೆದಾರರಿಗೆ ಬಿಗ್ ರಿಲೀಫ್
ಗಮನಿಸಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ