ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿಯನ್ನು ರೈತರು ನಡೆಸುತ್ತಿದ್ದಾರೆ. ಈ ಸರ್ಕಾರಿ ಭೂಮಿಗೆ ಸಾಗುವಳಿ ಹಕ್ಕುಪತ್ರವನ್ನು ಇದೇ ಜನವರಿ ತಿಂಗಳಿನಲ್ಲಿ ನೀಡೋದಾಗಿ ಸರ್ಕಾರ ಘೋಷಿಸಿದೆ. ಈ ಮೂಲಕ ಅರಣ್ಯ ಭೂಮಿಯಲ್ಲಿ ಕೃಷಿ ನಡೆಸುತ್ತಿರೋರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರೋರಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಜನವರಿ ಒಳಗಾಗಿ 7 ಸಾವಿರ ರೈತರಿಗೆ ಹಕ್ಕು ಪತ್ರವನ್ನು ನೀಡಲಾಗುತ್ತದೆ ಅಂತ ತಿಳಿಸಿದ್ದಾರೆ.
ಇನ್ನೂ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.