ಬೆಂಗಳೂರು: ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಿದ್ದು ಈ ನಡುವೆ ಇದೇ ಜನವರಿ 12ರಂದು ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಅಧಿಕೃತವಾಗಿ ಚಾಲನೆಯನ್ನು ನೀಡಲಿದ್ದಾರೆ.
ಈ ನಡುವೆ ಅರ್ಹರಿಗೆ ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಯಾವೆಲ್ಲ ದಾಖಲೆಗಳು ಬೇಕು? ಎಲ್ಲಿ ಅರ್ಜಿ ಸಲ್ಲಿಸಬಹುದು? ಈ ಎಲ್ಲಾ ಮಾಹಿತಿ ತಿಳಿಯಲು ಸಿಎಂ ಸಿದ್ದರಾಮುಯ್ಯ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಹಾಗಾದ್ರೇ ಅರ್ಜಿ ಸಲ್ಲಿಕೆಗೆ ಅರ್ಹತೆಗಳು ಏನು?
1) 2023ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆರ್ಹರಿದ್ದಾರೆ.
2) ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು ಅರ್ಜಿ ಸಲ್ಲಿಸಬಹುದಾಗಿದೆ.
3) ಸ್ವಯಂ ಉದ್ಯೋಗ ಹೊಂದಿಲ್ಲದವರು ಕೂಡ ಅರ್ಜಿ ಸಲ್ಲಿಸಬಹುದು
4) ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಕೂಡ ಅರ್ಹರು
5) ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು)
6) ನೋಂದಣಿಗೆ ಅಗತ್ಯವಿರುವ ದಾಖಲಾತಿಗಳು- ಎಸ್.ಎಸ್.ಎಲ್.ಸಿ. ಪಿಯುಸಿ, ಪದವಿ/ ಡಿಪ್ಲೋಮಾ ಪ್ರಮಾಣ ಪತ್ರ ಅವಶ್ಯಕ
7) ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಬಹುದು. ಯುವನಿಧಿಗೆ ಅರ್ಜಿ ಸಲ್ಲಿಸಲು ಬಯಸುವವರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗೆ ಭೇಟಿ ನೀಡಿ ಅಲ್ಲಿ ತಮ್ಮ ಆರ್ಜಿಯನ್ನು ಸಲ್ಲಿಸಬಹುದಾಗಿದೆ.
ನಿರುದ್ಯೋಗಿ ಯುವಜನರಿಗೆ ಮಾಸಿಕ ಧನಸಹಾಯ ನೀಡಿ, ಅವರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸುವ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಚಾಲನೆಯಲ್ಲಿದೆ.
ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಯಾವೆಲ್ಲ ದಾಖಲೆಗಳು ಬೇಕು? ಎಲ್ಲಿ ಅರ್ಜಿ ಸಲ್ಲಿಸಬಹುದು? ಈ ಎಲ್ಲಾ ಮಾಹಿತಿ ತಿಳಿಯಲು ತಪ್ಪದೇ ವೀಡಿಯೋ ನೋಡಿ.#ಯುವನಿಧಿ #YuvaNidhi pic.twitter.com/1ETWRSMxO6— Siddaramaiah (@siddaramaiah) January 4, 2024