ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಹಿಂಪಡೆಯಲಾಗಿತ್ತು. ಅಲ್ಲದೇ ಲೋಕಾಯುಕ್ತ ತನಿಖೆಗೆ ವಹಿಸೋ ನಿರ್ಧಾರವನ್ನು ಕೈಗೊಳ್ಳಲಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಬಿಐ ಇಂದು ಹೈಕೋರ್ಟ್ ಗೆ ತನ್ನ ಮನವಿಯನ್ನು ಪ್ರಕರಮ ಸಂಬಂಧ ಸಲ್ಲಿಸಲಿದೆ.
ಈ ಕುರಿತಂತೆ ಇಂದು ಹೈಕೋರ್ಟ್ ನ್ಯಾಯಪೀಠದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರೋ ಅರ್ಜಿಯನ್ನು ಕೂಡ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಇದೇ ಸಂದರ್ಭದಲ್ಲಿ ಲೋಕಾಯುಕ್ತ ತನಿಖೆಗೆ ವಹಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ವೇಳೆಯಲ್ಲೇ ಇಂದು ಹೈಕೋರ್ಟ್ ಗೆ ಸಿಬಿಐ ತನ್ನ ಮನವಿಯನ್ನು ತಲ್ಲಿಸಲಿದೆ.
ಇಂದು ಮಧ್ಯಾಹ್ನ 2.30ಕ್ಕೆ ಸಿಬಿಐ ತುರ್ತು ಅರ್ಜಿಯ ವಿಚಾರಣೆಗೆ ಮನವಿ ಮಾಡಲಿದ್ದು, ಸಿಬಿಐ ಮನವಿಯ ಬಳಿಕ ಕೋರ್ಟ್ ಯಾವ ನಿರ್ಧಾರವನ್ನು ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಹಿಂಪಡೆದ ನಿರ್ಧಾರವನ್ನು ಸಿಬಿಐ ಹೈಕೋರ್ಟ್ ನಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಲಿದೆ. ಆ ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನ್ಯಾಯಪೀಠದಲ್ಲಿ ವಿಚಾರಣೆ ನಡೆಯೋ ಸಾಧ್ಯತೆ ಇದೆ. ಆ ಬಳಿಕ ಹೈಕೋರ್ಟ್ ಯಾವ ತೀರ್ಪು ನೀಡಲಿದೆ ಅಂತ ತಿಳಿಯಲಿದೆ.
ಸಿಎಂ ಬಗ್ಗೆ ಅವಹೇಳನಕಾರಿ ಹೇಳಿಕೆ:’ಪ್ರತಿಪಕ್ಷ ನಾಯಕ’ ಅಶೋಕ್ ಸೇರಿ 42 ಬಿಜೆಪಿ ನಾಯಕರ ವಿರುದ್ಧ FIR ದಾಖಲು