ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉನ್ನತ ಶಿಕ್ಷಣ ಸಚಿವರಾದ ಡಾ||ಎಂ.ಸಿ.ಸುಧಾಕರ್ ಮತ್ತು ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ಘೋಷಿಸಿದ್ದಾರೆ. ಅದರಲ್ಲಿ ಗೌರವಧನವನ್ನು 5,000ದಿಂದ 8,000ಕ್ಕೆ ಹೆಚ್ಚಳ ಮಾಡುವುದು ಒಂದಾಗಿದೆ.
ಈ ಕುರಿತಂತೆ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಸಿದ್ಧರಾಮಯ್ಯ, ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು ಎಂದಿದ್ದಾರೆ.
ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾನು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ಗೌರವಧನ ಹೆಚ್ಚಳಕ್ಕೆ ಮುಂದಾಗಿದೆ ಎಂದು ತಿಳಿಸಿದ್ದಾರೆ.
ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದಿದ್ದಾರೆ.
ಇದರ ಜೊತೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು ಅಂತ ತಿಳಿಸಿದ್ದಾರೆ.
ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ಇದೆ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡುತ್ತೇನೆ.
ಮುಖ್ಯಮಂತ್ರಿ @siddaramaiah ಅವರು ಉನ್ನತ ಶಿಕ್ಷಣ ಸಚಿವರಾದ ಡಾ||ಎಂ.ಸಿ.ಸುಧಾಕರ್ ಮತ್ತು ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ಘೋಷಿಸಿದರು.
ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ… pic.twitter.com/cWQD2TQjfP
— CM of Karnataka (@CMofKarnataka) January 6, 2024
ರಾಜ್ಯದಲ್ಲಿ ಮತ್ತೊಂದು ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜು
BREAKING: ಇಸ್ರೋದ ಮೊದಲ ಸೂರ್ಯ ಮಿಷನ್ ಯಶಸ್ವಿ: ಅಂತಿಮ ಕಕ್ಷೆಗೆ ಆದಿತ್ಯ ಎಲ್1 ಸೇರ್ಪಡೆ | Aditya L-1