ಬೆಂಗಳೂರು: ಕಾಂಗ್ರೆಸ್ ಫೇಸ್ ಬುಕ್ ಪೇಜ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಪೇಜ್ ನಿಂದ ಬಿಜೆಪಿ ನಾಯಕರ ಪೋಟೋ ದುರ್ಬಳಕೆ ಆರೋಪದ ಹಿನ್ನಲೆಯಲ್ಲಿ, ಬಿಜೆಪಿ ದೂರು ನೀಡಿದೆ.
ಇಂದು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿದಂತ ಬಿಜೆಪಿ ಕಾನೂನು ಪ್ರಕೋಷ್ಠದ ಮುಖಂಡರು, ಕಾಂಗ್ರೆಸ್ ಪಕ್ಷದ ಫೇಸ್ ಬುಕ್ ಪೇಜ್ ನಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಪೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಲಾಗುತ್ತಿದೆ. ಸುಳ್ಳು ಸುದ್ದಿಯನ್ನು ಪ್ರಕಟಿಸಲಾಗುತ್ತಿದೆ. ಇಂತಹ ಫೇಸ್ ಬುಕ್ ಹ್ಯಾಂಡಲ್ ಮಾಡೋರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಿ.ಟಿ ರವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಸಂಸದ ಪ್ರತಾಪ್ ಸಿಂಹ ಪೋಟೋ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಫೇಸ್ ಬುಕ್ ಪೇಜ್, ಕರ್ನಾಟಕ ಕಾಂಗ್ರೆಸ್ ಪೇಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ರಾಜ್ಯದಲ್ಲಿ ಮತ್ತೊಂದು ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜು
BREAKING: ಇಸ್ರೋದ ಮೊದಲ ಸೂರ್ಯ ಮಿಷನ್ ಯಶಸ್ವಿ: ಅಂತಿಮ ಕಕ್ಷೆಗೆ ಆದಿತ್ಯ ಎಲ್1 ಸೇರ್ಪಡೆ | Aditya L-1