ಮುಂಬೈ: ಕೆನರಾ ಬ್ಯಾಂಕ್ ಗೆ 538 ಕೋಟಿ ರೂ.ಗಳ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಭರವಸೆ ಇಲ್ಲ, ಜೈಲಿನಲ್ಲೇ ಸಾಯುವೆ ಶನಿವಾರ ವಿಶೇಷ ನ್ಯಾಯಾಲಯಕ್ಕೆ ಕೈಮುಗಿದು ಹೇಳಿದರು.
ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಪತ್ನಿ ಅನಿತಾ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮತ್ತು ಅವರು ಕ್ಯಾನ್ಸರ್ನ ಮುಂದುವರಿದ ಹಂತದಲ್ಲಿದ್ದಾರೆ ಎಂದು ಕಣ್ಣೀರು ಹಾಕಿದರು. ಬ್ಯಾಂಕ್ ವಂಚನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಳೆದ ವರ್ಷ ಸೆಪ್ಟೆಂಬರ್ 1 ರಂದು ಗೋಯಲ್ ಅವರನ್ನು ಬಂಧಿಸಿತ್ತು. ಅವರು ಪ್ರಸ್ತುತ ಇಲ್ಲಿನ ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಗೋಯಲ್ ಅವರು ವಿಶೇಷ ನ್ಯಾಯಾಧೀಶ ಎಂ.ಜಿ.ದೇಸ್ಪಾಂಡೆ ಅವರ ಮುಂದೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅವರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಮತ್ತು ವಿಚಾರಣೆಯ ಸಮಯದಲ್ಲಿ ಗೋಯಲ್ ಕೆಲವು ನಿಮಿಷಗಳ ವೈಯಕ್ತಿಕ ವಿಚಾರಣೆಯನ್ನು ಕೋರಿದರು, ಅದಕ್ಕೆ ನ್ಯಾಯಾಧೀಶರು ಅನುಮತಿ ನೀಡಿದರು.