ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಮತ್ತೊಬ್ಬ ಯುವತಿಗೆ ಯುವಕನೋರ್ವನಿಂದ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ. ಯುವತಿ ಭದ್ರತಾ ಸಿಬ್ಬಂದಿಗಳಿಗೆ ನೀಡಿದಂತ ಮಾಹಿತಿ ಮೇರೆಗೆ ಆತನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಲಾಗಿರೋದಾಗಿ ತಿಳಿದು ಬಂದಿದೆ.
ಜನವರಿ.1ರಂದು ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರೋ ಆರೋಪ ಕೇಳಿ ಬಂದಿದೆ. ಯುವತಿಯ ಖಾಸಗಿ ಅಂಗಾಂಗವನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿರೋದಾಗಿ ಯುವತಿ ಮೆಟ್ರೋ ಭದ್ರತಾ ಸಿಬ್ಬಂದಿಗೆ ದೂರು ನೀಡಿದ್ದಾಳೆ.
ಯುವತಿ ನೀಡಿದಂತ ದೂರನ್ನು ಆಧರಿಸಿ, ಕೂಡಲೇ ಆ ಯುವಕನನ್ನು ವಶಕ್ಕೆ ಪಡೆದು, ಪೊಲೀಸರಿಗೆ ಒಪ್ಪಿಸಲಾಗಿದೆ. ಆ ಯುವಕನನ್ನು ವಿಚಾರಣೆ ನಡೆಸಿದಾಗ, ತಾನು ಲೈಂಗಿಕ ಕಿರುಕುಳ ನೀಡಿದಂತ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಅಲ್ಲದೇ ತಪ್ಪಾಯ್ತು ಮತ್ತೆ ಹೀಗೆ ಮಾಡೋದಿಲ್ಲ ಅಂತ ಪೊಲೀಸರು, ಯುವತಿಯ ಮುಂದೆ ಕ್ಷಮೆಯಾಚಿಸಿದ್ದಾನೆ ಎಂಬುದಾಗಿ ತಿಳಿದು ಬಂದಿದೆ.
ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಅಘೋಷಿತ ಎಮರ್ಜೆನ್ಸಿ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
ಬೆಂಗಳೂರಲ್ಲಿ ‘ರೇಷ್ಮೆ ಭವನ’ ನಿರ್ಮಾಣಕ್ಕೆ ಹೂಡಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ