ವಸಂತ್ ಬಿ ಈಶ್ವರಗೆರೆ
ಬೆಂಗಳೂರು: 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಪಿ.ಎಸ್.ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿಯ ಕ್ರಮವಾಗಿ (One time measure) ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡುವ ಬಗ್ಗೆ ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಗೊಳ್ಳಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಹಾಜರಾಗಲು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಹಾಜರಾಗಲು ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಗರಿಷ್ಠ 3 ವರ್ಷಗಳವರೆಗೆ ಸಡಿಲಿಸಲು ಪ್ರಸ್ತಾಪಿಸಿದೆ.
ವರ್ಗ ಈಗಿರುವ ವಯೋಮಿತಿ ವಿಸ್ತರಿತ ವಯೋಮಿತಿ
ವರ್ಗ | ಈಗಿರುವ ವಯೋಮಿತಿ | ವಿಸ್ತರಿತ ವಯೋಮಿತಿ |
ಸಾಮಾನ್ಯ | 35 ವರ್ಷ | 38 ವರ್ಷ |
ಪ್ರವರ್ಗ 2ಎ, 2ಬಿ, 3ಎ, 3ಬಿ | 38 ವರ್ಷ | 41 ವರ್ಷ |
ಪ.ಪಂ. ಪ್ರವರ್ಗ-1 | 40 ವರ್ಷ | 43 ವರ್ಷ |
ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ) ನಿಯಮಗಳು, 1997 ರನ್ವಯ 2023-24ನೇ ಸಾಲಿಗೆ ಕರ್ನಾಟಕ ಲೋಕಸೇವಾ ಆಯೋಗವು ರಿಕ್ತ ಸ್ಥಾನಗಳಿಗೆ ಹೊಸದಾಗಿ ಹೊರಡಿಸಲಿರುವ ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ ಎಲ್ಲಾ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿ (One time Measure) ಗರಿಷ್ಠ ವಯೋಮಿತಿಯನ್ನು (One time Measure) 3 ವರ್ಷಗಳಿಗೆ ಹೆಚ್ಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್ಸಿ ಅಧಿಸೂಚನೆ ಹೊರಡಿಸಲಿದ್ದು, ಎಲ್ಲ ಅಭ್ಯರ್ಥಿಗಳಿಗೆ ಒಂದು ಬಾರಿ ಗರಿಷ್ಠ ವಯೋಮಿತಿ ಸಡಿಲಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಕೋವಿಡ್ ಮತ್ತು ನೇಮಕಾತಿ ವಿಳಂಬ ಆದ ಕಾರಣ ಈ ಸಡಿಲಿಕೆ ಒಂದು ಬಾರಿಗೆ ಮಾತ್ರ ಅನ್ವಯವಾಗಲಿದೆ ಎಂದು ಕಾನೂನು ಸಚಿವ ಎಚ್… pic.twitter.com/yrJjPOGWGC
— DIPR Karnataka (@KarnatakaVarthe) January 6, 2024