ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸಂಚರಿಸುತ್ತಿದ್ದ ಬಸ್ ಪಲ್ಟಿಯಾಗಿ 15 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಗುಡ್ಡೆತೋಟದ ಬಳಿ ನಡೆದಿದೆ. ಜಯಪುರದಿಂದ ಗುಡ್ಡೆತೋಟದ ಮೂಲಕ ಹೊರನಾಡಿಗೆ ಹೋಗುವಾಗ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ ಘಟನೆಗೆ ಸರಿಯಾದ ಕಾರಣ ಇನ್ನೂ ಇಳಿದು ಬಂದಿಲ್ಲ.
ಮೈಸೂರು ಮೂಲದ ಬಸ್ಸಿನಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿ ಬಂದಿದ್ದ ಮಾಲಾಧಾರಿಗಳು, ಶೃಂಗೇರಿ ಶಾರದಾಂಬೆ ದರ್ಶನ ಪಡೆದು ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದರು ಅಂತ ತಿಳಿದು ಬಂದಿದೆ. ಗಾಯಾಳುಗಳನ್ನ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.