ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೋವಿಡ್ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. ಇಂದು 329 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 1181 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ( Karnataka Health and Family Welfare Department ) ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ RTPC ಮೂಲಕ 3367 ಹಾಗೂ RAT ಮೂಲಕ 452 ಸೇರಿದೆತ 3819 ಮಂದಿಯನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ( Covid19 Test ) ಒಳಪಡಿಸಲಾಗಿದೆ ಅಂತ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 283 ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 1181ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಕೋವಿಡ್ ಸೋಂಕಿನಿಂದ ಒಂದು ಸಾವು ಅಂತ ತಿಳಿಸಿದೆ.