ಮಡಿಕೇರಿ: ಮಡಿಕೇರಿ ಜ.09(ಕರ್ನಾಟಕ ವಾರ್ತೆ):-ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡದ ಇಲಾಖೆಯ ವೆಬ್‍ಸೈಟ್ https://ssp.postmatric.karnataka.gov.in ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ(ಆದಾಯದ ಮಿತಿ 2.50 ಲಕ್ಷ), ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್‍ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು. ದೂರವಾಣಿ ಸಂಖ್ಯೆ ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂ.ಸಂ. ಕಡ್ಡಾಯವಾಗಿರಬೇಕು. ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಅಧ್ಯಯನ-ಬೋನಾಫೈಡ್ ಪ್ರಮಾಣ ಪತ್ರ, ಪ್ರಸಕ್ತ ಕೋರ್ಸ್‍ನ ಶುಲ್ಕ ರಶೀದಿ ಪ್ರತಿ, ತಂದೆ, ತಾಯಿ/ಪೋಷಕರ ಆಧಾರ್ ಕಾರ್ಡ್ ಪ್ರತಿ, ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ದೇಚೂರು ಮಡಿಕೇರಿ ಕಚೇರಿ ದೂ.ಸಂ.9480843155 ನ್ನು ಮತ್ತು ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ 9482300400 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.