ಬೆಂಗಳೂರು:2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನವನ್ನು (Summative Assessment-(SA-2) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ.
ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಅಂತಿಮ ವೇಳಾಪಟ್ಟಿಯನ್ನು ಜನವರಿ 5 ರಂದು ಮಂಡಳಿಯ ವೆಬ್‍ಸೈಟ್ https://kseab.karnataka.gov.in/ ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಹೀಗಿದೆ 5, 8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯ ಅಂತಿಮ ವೇಳಾಪಟ್ಟಿ
ಹೀಗಿದೆ ಮಾರ್ಚ್-2024ರ 5ನೇ ತರಗತಿ ಮೌಲ್ಯಾಂಕನ ಕಾರ್ಯದ ತಾತ್ಕಾಲಿಕ ವೇಳಾಪಟ್ಟಿ
- ದಿನಾಂಕ 11-03-2024ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಮರಾಠಿ, ತೆಲುಗು, ತಮಿಳು.
- ದಿನಾಂಕ 12-03-2023ರ ಮಂಗಳವಾರ- ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
- ದಿನಾಂಕ 13-03-2024ರ ಬುಧವಾರ – ಕೋರ್ ವಿಷಯ – ಪರಿಸರ ಅಧ್ಯಯನ
- ದಿನಾಂಕ 14-03-2024ರ ಗುರುವಾರ- ಕೋರ್ ವಿಷಯ – ಗಣಿತ