ಬೆಂಗಳೂರು: ರಾಜ್ಯದ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಟಿಕೆಟ್ ದರದಲ್ಲಿ 1 ರೂ ಹೆಚ್ಚಳ ಮಾಡಿದ್ದೂ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ಗಳಲ್ಲಿ ಜ.1 ರಿಂದ 50 ರೂ. ಮೇಲ್ಪಟ್ಟು ಟಿಕೆಟ್ ಖರೀದಿಸುವ ಪ್ರಯಾಣಿಕರಿಂದ 1 ರೂ. ಹೆಚ್ಚಿಗೆ ಸಂಗ್ರಹ ಮಾಡಲಾಗುತ್ತಿದೆ. ಹೆಚ್ಚಿಗೆ ಪಡೆದ 1 ರೂ.ಗಳನ್ನು ಅಪಘಾತ ವಿಮೆಗೆ ಬಳಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಪಘಾತ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಇದು ಜನೆವರಿ 1ಕ್ಕೆ ಜಾರಿಯಾಗಿದೆ ಹೀಗಾಗಿ ಪ್ರಯಾಣಿಕರಿಂದ 1 ರೂ. ಹೆಚ್ಚಿಗೆ ಸಂಗ್ರಹ ಮಾಡಲಾಗುತ್ತಿದೆ.ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶದಿಂದ ಸಂಗ್ರಹಿಸಲಾಗುತ್ತಿದೆ. ಆದರೆ ಟಿಕೆಟ್ ದರ ಹೆಚ್ಚಿಗೆ ಮಾಡಿಲ್ಲ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
50 ರೂ.ನಿಂದ 99 ರೂ.ವರೆಗಿನ ಮುಖ ಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ 1 ರೂ. ಮತ್ತು 100 ರೂ. ಹಾಗೂ ಹೆಚ್ಚಿನ ಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ 2 ರೂ.ನಂತೆ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಿಸಲಾಗುತ್ತಿದೆ. ಈ ಹಿಂದೆ 100 ರೂ. ಮುಖಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 1 ರೂ. ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆ ಮಾಡಲಾಗುತ್ತಿತ್ತು.