ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿ ಹಲವು ಸರಕಾರಿ ಅಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ.
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ವಿಜಯನಗರ ಜಿಲ್ಲೆಯ ಬೆಸ್ಕಾಂ ಅಧಿಕಾರಿಯಾಗಿರುವ ನಾಗರಾಜ್ ಎನ್ನುವವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ನಾಗರಾಜ್ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೂಡ್ಲಿಗಿ ಪಟ್ಟಣ ಗುಡೆಕೋಟೆ ಗ್ರಾಮದ ಮನೆಗಳಲ್ಲಿ ಲೋಕಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಕೂಡ್ಲಿಗಿ ಪಟ್ಟಣ ಗುಡೆಕೋಟೆ ಗ್ರಾಮದಲ್ಲಿ ಅಕ್ರಮ ಆಸ್ತಿ ಆರೋಪ ಹಿನ್ನೆಲೆಯಲ್ಲಿ ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್,ಮನೆ,ಜಮೀನು ಖರೀದಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಚಿತ್ರದುರ್ಗ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ಮಂಡ್ಯದ ಮೂರು ಕಡೆ ದಾಳಿ
ಅದೇ ರೀತಿ ಮಂಡ್ಯದ ಬಿಬಿಎಂಪಿ ಅಧಿಕಾರಿ ಮಂಜೇಶ್ ಎನ್ನುವವರಿಗೆ ಬೆಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಮಂಜೇಶ್ ಮನೆ ಸೇರಿದಂತೆ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಳವಳ್ಳಿ ತಾಲೂಕಿನ ಹಲಗೂರು ಹಾಗೂ ಕುಂದಾಪುರ ಗ್ರಾಮದ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.ಅಲ್ಲದೆ ಮಂಜೇಶ್ ಸಂಬಂಧಿ ಸುರೇಂದ್ರಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದೆ.ಮದ್ದೂರು ತಾಲೂಕಿನ ಎಸ್ ಐ ಕೋಡಿಹಳ್ಳಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸ್ಐ ಕೋಡಿಹಳ್ಳಿಯಲ್ಲಿರುವ ಬಿಬಿಎಂಪಿ ಅಧಿಕಾರಿ ಮಂಜೇಶ್ ಅಜ್ಜಿ ಮನೆ ಸೇರಿದಂತೆ ಮಂಜೇಶ್ಗೆ ಸಂಬಂಧಿಸಿದಂತಹ ಪ್ರತಿಯೊಬ್ಬರ ನಿವಾಸದ ಮೇಲು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.