ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದು, ತಲೆ ಮರೆಸಿಕೊಂಡು ಓಡಾಡುತ್ತಿದ್ದಂತ ನಟೋರಿಯಸ್ ರೌಡಿ ಶೀಟ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ, ಬಂಧಿಸಿದ್ದಾರೆ.
ಮಂಗಳೂರು ಹೊರ ವಲಯದಲ್ಲಿ ರೌಡಿ ಶೀಟರ್ ಆಕಾಶ್ ಭವನ್ ಶರಣ್ ಎಂಬಾತ ತಲೆ ಮರೆಸಿಕೊಂಡಿರೋ ಮಾಹಿತಿ ಮೇರೆಗೆ, ಸ್ಥಳಕ್ಕೆ ಪೊಲೀಸರು ಬಂಧಿಸೋದಕ್ಕೆ ತೆರಳಿದ್ದಾರೆ. ಪೊಲೀಸರು ಬಂಧಿರೋ ವಿಷಯ ತಿಳಿದಂತ ಆತ, ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗೋದಕ್ಕೆ ಯತ್ನಿಸಿದ್ದಾನೆ.
ಪೊಲೀಸರ ಮೇಲೆ ಹಲ್ಲೆ ನಡೆಸಿದಂತ ರೌಡಿ ಶೀಟರ್ ಆಕಾಶ್ ಭವನ್ ಶರಣ್ ನನ್ನು ಶರಣಾಗುವಂತೆ ಸೂಚಿಸಲಾಗಿದೆ. ಆದರೂ ಕೇಳದೇ ಅಲ್ಲಿಂದ ಪರಾರಿಯಾಗೋದಕ್ಕೆ ಯತ್ನಿಸಿದಾಗ ಆತನ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ.
ಗಂಡೇಟಿನಿಂದ ಗಾಯಗೊಂಡಿದ್ದಂತ ರೌಡಿ ಶೀಟರ್ ಆಕಾಶ್ ಭವನ್ ಶರಣ್ ಅನ್ನು ಪೊಲೀಸರು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING: ‘ಸ್ವಂತ ಮಗ’ನನ್ನೇ ಕೊಂದ ಪ್ರಕರಣ: ‘ಸಿಇಓ ಸುಚನಾ’ 6 ದಿನ ಗೋಪಾ ಪೊಲೀಸರ ಕಸ್ಟಡಿಗೆ
‘ಸವದತ್ತಿ ಯಲ್ಲಮ್ಮನ ಭಕ್ತ’ರಿಗೆ ಗುಡ್ ನ್ಯೂಸ್: ಸಮಗ್ರ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಾಸ್ಟರ್ ಫ್ಲ್ಯಾನ್